ಈಡಿ ಅಧಿಕಾರಿಯ ಸೋಗಿನಲ್ಲಿ TMC ಸಂಸದನಿಗೆ ವಂಚಿಸಲು ಯತ್ನಿಸಿದ್ದ ವ್ಯಕ್ತಿಯ ಬಂಧನ

Prasthutha: July 16, 2021

ಕೋಲ್ಕತ್ತಾ: ಜಾರಿ ನಿರ್ದೇಶನಾಲಯ(ED) ಅಧಿಕಾರಿಯ ಸೋಗಿನಲ್ಲಿ ತೃಣಮೂಲ ಕಾಂಗ್ರೆಸ್ ಸಂಸದ ಶಂತನು ಸೇನ್ ಅವರಿಗೆ ವಂಚಿಸಲು ಯತ್ನಿಸಿದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಕೋಲ್ಕತ್ತಾ ಪೊಲೀಸರು ತಿಳಿಸಿದ್ದಾರೆ. ಬಂಧಿತನನ್ನು ಡಮ್ ಡಮ್ ಪ್ರದೇಶದ ನಿವಾಸಿ ಚಂದನ್ ರಾಯ್ (38) ಎಂದು ಗುರುತಿಸಲಾಗಿದೆ.

“ಸಂಸದರಿಗೆ ಅಪರಿಚಿತ ಸಂಖ್ಯೆಯಿಂದ ಕರೆ ಮಾಡಿ ಇಡಿ ಅಧಿಕಾರಿಯಂತೆ ನಟಿಸಿದ ಆರೋಪಿ ಕೇಂದ್ರ ಏಜೆನ್ಸಿಯಲ್ಲಿ ದಾಖಲಾದ ಹಲವಾರು ಪ್ರಕರಣಗಳ ಬಗ್ಗೆ ವ್ಯವಹರಿಸಿದ್ದಾನೆ. ಕೊನೆಗೆ ಸಂಶಯಗೊಂಡ ಸಂಸದ ಸೇನ್, ಲಾಲ್ ಬಜಾರ್ ನಲ್ಲಿರುವ ಈಡಿ ಅಧಿಕಾರಿಗಳನ್ನು ಸಂಪರ್ಕಿಸಿದ್ದಾರೆ. ಕರೆ ಮಾಡಿರುವ ಫೋನ್ ಸಂಖ್ಯೆಯ ಜಾಡು ಹಿಡಿದು ವ್ಯಕ್ತಿಯ ವಿವರಗಳನ್ನು ಪತ್ತೆಹಚ್ಚಿದ ಪೊಲೀಸರು ಆರೊಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕರೇಯಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಂಸದರಿಗೆ ಕರೆ ಮಾಡಲು ಬಳಸುತ್ತಿದ್ದ ಮೊಬೈಲ್ ಫೋನ್ ಅನ್ನು ವಶಪಡಿಸಿಕೊಳ್ಳಲಾಗಿದೆ. “ಈ ವ್ಯಕ್ತಿಯು ಇತರ ಹಲವಾರು ಜನರನ್ನು ಇದೇ ರೀತಿ ವಂಚಿಸಲು ಪ್ರಯತ್ನಿಸಿದ್ದು, ಆತನ ವಿರುದ್ಧ ಇತರ ದೂರುಗಳೂ ಬಂದಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!