Home ಟಾಪ್ ಸುದ್ದಿಗಳು ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಹಲ್ಲೆ ನಡೆದದ್ದಲ್ಲ: ದಾಖಲೆ ಸಹಿತ ಸ್ಪಷ್ಟಪಡಿಸಿದ ದಿನೇಶ್ ಗುಂಡೂರಾವ್

ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಹಲ್ಲೆ ನಡೆದದ್ದಲ್ಲ: ದಾಖಲೆ ಸಹಿತ ಸ್ಪಷ್ಟಪಡಿಸಿದ ದಿನೇಶ್ ಗುಂಡೂರಾವ್

ಬೆಂಗಳೂರು: ನಗರದ ನಗರತಪೇಟೆಯಲ್ಲಿ ಹನುಮಾನ್ ಜಾಲೀಸಾ ಹಾಕಿದ್ದಕ್ಕೇ ಮೊಬೈಲ್ ಸ್ಪೇರ್ ಪಾರ್ಟ್ಸ್ ಅಂಗಡಿಯ ಮಾಲೀಕನ ಮೇಲೆ ಹಲ್ಲೆ ನಡೆಸಲಾಗಿದೆ ಎಂಬ ಪ್ರಕರಣದ ಬಗ್ಗೆ ಸಚಿವ ದಿನೇಶ್ ಗುಂಡೂರಾವ್ ದಾಖಲೆ ನೀಡಿದ್ದು, ಹನುಮಾನ್ ಚಾಲೀಸ್ ಹಾಕಿದ್ದಕ್ಕೆ ಹಲ್ಲೆ ನಡೆದದ್ದಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಎಕ್ಸ್ ಪೋಸ್ಟ್ ಮಾಡಿರುವ ಅವರು, ಪ್ರಚೋದನೆಗೆ ಒಳಗಾಗದೆ ವಿವೇಚನೆಯಿಂದ ಯೋಚಿಸಿ. ಲಭ್ಯವಾದ ಎಫ್‌ಐಆರ್ ಪ್ರತಿ ಮತ್ತು ಮುಖೇಶ್ ಅವರು ಕೊಟ್ಟಿರುವ ಕೈ ಬರಹದ ದೂರಿನಲ್ಲಿ ಎಲ್ಲಿಯೂ ನಮಾಝ್ ಅಥವಾ ಆಝಾನ್ ಸಮಯದಲ್ಲಿ ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಹಲ್ಲೆ ಮಾಡಿದ್ದಾರೆ ಎಂದು ಎಲ್ಲೂ ಉಲ್ಲೇಖಿಸಿಲ್ಲ ಎಂದು ದಾಖಲೆಯೊಂದಿಗೆ ತಿಳಿಸಿದ್ದಾರೆ.

ಅಲ್ಲದೆ, ಮಾಧ್ಯಮಗಳು ಮತ್ತು ಬಿಜೆಪಿ ನಾಯಕರು ಆರೋಪಿಸಿದಂತೆ ಪ್ರಕರಣದ ಆರೋಪಿಗಳಲ್ಲಿ ಮುಸ್ಲಿಮರು ಮಾತ್ರ ಇರುವುದಲ್ಲ. ಆರು ಆರೋಪಿಗಳಲ್ಲಿ ಮೂವರು ಮುಸ್ಲಿಮರು ಮತ್ತು ಇಬ್ಬರು ಹಿಂದೂ ಆರೋಪಿಗಳಿದ್ದಾರೆ. ಈ ಬಗ್ಗೆ ಹೆಚ್ಚಿನ ವಿವರಣೆ ಮತ್ತು ಸ್ಪಷ್ಟೀಕರಣವನ್ನು ತನಿಖೆಯ ಬಳಿಕ ಪೊಲೀಸರು ತಿಳಿಸಬೇಕಾಗಿದೆ ಎಂದು ಹೇಳಿದ್ದಾರೆ.

Join Whatsapp
Exit mobile version