ಟೀಮ್ ಇಂಡಿಯಾದ ಹೆಸರಲ್ಲಿದ್ದ ವಿಶ್ವ ದಾಖಲೆ ಮುರಿದು ಬೀಗಿದ ಆಸೀಸ್ ಪಡೆ

Prasthutha|

ಆಂಟಿಗುವಾ: ಆಸೀಸ್ ಪಡೆ ಟಿ20 ವಿಶ್ವಕಪ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದೆ. ಟೀಮ್ ಇಂಡಿಯಾದ ಹೆಸರಲ್ಲಿದ್ದ ವಿಶ್ವ ದಾಖಲೆಯನ್ನು ಮುರಿಯುವ ಮೂಲಕ ಈ ಸಾಧನೆ ಮಾಡಿದೆ ಎಂಬುದು ವಿಶೇಷ.

- Advertisement -

2022ರ ಟಿ20 ವಿಶ್ವಕಪ್​ನಲ್ಲಿ ಶುರುವಾದ ಆಸೀಸ್ ಪಡೆಯ ಗೆಲುವಿನ ನಾಗಾಲೋಟ ಈ ಬಾರಿ ಕೂಡ ಮುಂದುವರೆದಿದೆ. ಟಿ20 ವಿಶ್ವಕಪ್​ ಇತಿಹಾಸದಲ್ಲಿ ಅತೀ ಹೆಚ್ಚು ಬಾರಿ ಸತತ ಜಯ ದಾಖಲಿಸಿದ ದಾಖಲೆಯನ್ನು ಆಸ್ಟ್ರೇಲಿಯಾ ತಂಡ ತನ್ನದಾಗಿಸಿಕೊಂಡಿದೆ.

ಭಾರತ ತಂಡವು 2012-2014 ರ ಟಿ20 ವಿಶ್ವಕಪ್​ನಲ್ಲಿ ಸತತ 7 ಪಂದ್ಯಗಳಲ್ಲಿ ಜಯ ಸಾಧಿಸಿತ್ತು. ಈ ಮೂಲಕ ಎರಡು ವಿಶ್ವಕಪ್​ನಲ್ಲಿ ಸತತ ಏಳು ಗೆಲುವು ದಾಖಲಿಸಿ ಟೀಮ್ ಇಂಡಿಯಾ ವಿಶ್ವ ದಾಖಲೆ ನಿರ್ಮಿಸಿತ್ತು. ಇದೀಗ 8 ಪಂದ್ಯಗಳಲ್ಲಿ ಜಯ ಗಳಿಸುವ ಮೂಲಕ ಆಸ್ಟ್ರೇಲಿಯಾ ತಂಡ ಟೀಮ್​ ಇಂಡಿಯಾ ಹೆಸರಿನಲ್ಲಿದ್ದ ದಾಖಲೆಯನ್ನು ತನ್ನದಾಗಿಸಿಕೊಂಡಿದೆ.

- Advertisement -

ಆಂಟಿಗುವಾದ ಸರ್​ ವಿವಿಯನ್​ ರಿಚರ್ಡ್ಸ್​ ಕ್ರೀಡಾಂಗಣದಲ್ಲಿ ನಡೆದ ಟಿ-20 ವಿಶ್ವಕಪ್​ನ ಸೂಪರ್​ 08 ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಬಾಂಗ್ಲಾದೇಶ ವಿರುದ್ಧ ಗೆದ್ದಿದ್ದು, ಈ ಮೂಲಕ ಟಿ-20 ವಿಶ್ವಕಪ್​ನಲ್ಲಿ ಹೊಸ ದಾಖಲೆ ಒಂದನ್ನು ಬರೆದು ಬೀಗಿದೆ.

ಟಾಸ್​ ಸೋತು ಮೊದಲು ಬ್ಯಾಟಿಂಗ್​ ಮಾಡಿದ ಬಾಂಗ್ಲಾದೇಶ ತಂಡ ನಿಗದಿತ 20 ಓವರ್​ಗಳಲ್ಲಿ 8 ವಿಕೆಟ್​ ನಷ್ಟಕ್ಕೆ 140 ರನ್​ ಗಳಿಸಿತ್ತು. ಸುಲಭ ಗುರಿ ಬೆನ್ನು ಹತ್ತಿದ ಆಸ್ಟ್ರೇಲಿಯಾ ತಂಡವು 11.2 ಓವರ್​ಗಳಲ್ಲಿ 2 ವಿಕೆಟ್ ಕಳೆದುಕೊಂಡು 100 ರನ್ ಕಲೆಹಾಕಿತ್ತು. ಈ ವೇಳೆ ಮಳೆ ಸುರಿದ ಪರಿಣಾಮ ಡಕ್​ವರ್ತ್ ಲೂಯಿಸ್ ನಿಯಮದ ಪ್ರಕಾರ ಆಸ್ಟ್ರೇಲಿಯಾ ತಂಡವನ್ನು ವಿನ್ನರ್ಸ್ ಅಂಪೈರ್​ಗಳು​​ ಎಂದು ಘೋಷಿಸಲಾಯಿತು. ಈ ಗೆಲುವಿನೊಂದಿಗೆ ಆಸೀಸ್ ಪಡೆ ಟಿ20 ವಿಶ್ವಕಪ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದೆ.

Join Whatsapp
Exit mobile version