ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯ ಹಿನ್ನೆಲೆಯಲ್ಲಿ ದೇವರಕೊಲ್ಲಿ, ಕೊಯನಾಡು ನಡುವಿನ ರಸ್ತೆಯಲ್ಲಿ ಬಿರುಕು ಕಾಣಿಸಿಕೊಂಡಿದೆ. ಇದರಿಂದಾಗಿ ಖಾಸಗಿ ಘನವಾಹನಗಳ ಸಂಚಾರಕ್ಕೆ ಜಿಲ್ಲಾಡಳಿತ ನಿಷೇಧ ಹೇರಿದೆ.
ಅಲ್ಲದೆ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಅಲ್ಲಿನ ರಸ್ತೆಗಳ ಪರಿಸ್ಥಿತಿಯನ್ನು ಅವಲೋಕನ ನಡೆಸಲಿದ್ದಾರೆ ಎಂದು ಹೇಳಲಾಗಿದೆ.
ದ.ಕ ಜಿಲ್ಲೆಯ ಸಮೀಪದಲ್ಲಿರುವ ಕೊಡಗು ಜಿಲ್ಲೆಯ ಕೆಲವು ಕಡೆಗಳಲ್ಲಿ ಭಾರಿ ಮಳೆ ಬಂದಿದೆ. ಇಲ್ಲಿನ ಗಡಿ ಪ್ರದೇಶಗಳಾದ ಕಲ್ಲಗುಂಡಿ, ಸಂಪಾಜೆ, ಗೂನಡ್ಕ ಸೇರಿದಂತೆ ಹಲವು ಗ್ರಾಮಗಳು ಜಲಾವೃತಗೊಂಡಿದೆ. ಪಯಸ್ವಿನಿ ನದಿ ಮೈತುಂಬಿ ಹರಿಯುತ್ತಿರುವುದರಿಂದ ಸ್ಥಳೀಯ ನಾಗರಿಕರಲ್ಲಿ ಆತಂಕ ಮೂಡಿಸಿದೆ.