Home ಟಾಪ್ ಸುದ್ದಿಗಳು ತನ್ನ ರಾಜಕೀಯ ಎದುರಾಳಿಗಳನ್ನು ಹಣಿಯಲು ಬಿಜೆಪಿ ಕೇಂದ್ರ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡುತ್ತಿದೆ : ಶಿವಸೇನೆ

ತನ್ನ ರಾಜಕೀಯ ಎದುರಾಳಿಗಳನ್ನು ಹಣಿಯಲು ಬಿಜೆಪಿ ಕೇಂದ್ರ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡುತ್ತಿದೆ : ಶಿವಸೇನೆ

“ಬಿಜೆಪಿಯು ತನ್ನ ರಾಜಕೀಯ ಎದುರಾಳಿಗಳನ್ನು ಮೂಲೆಗುಂಪು ಮಾಡಲು ಕಾನೂನು ಮತ್ತು ಕೇಂದ್ರ ತನಿಖಾ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಳ್ಳುತ್ತಿದೆ” ಎಂದು  ಶಿವಸೇನೆ ಹೇಳಿದೆ.

ಶಿವಸೇನೆಯು ತನ್ನ ಮುಖವಾಣಿ ಸಾಮ್ನಾದ ಸಂಪಾದಕೀಯದಲ್ಲಿ “ಮಹಾರಾಷ್ಟ್ರ ಸರ್ಕಾರವನ್ನು ಹೀಗೆ ದುರ್ಬಲಗೊಳಿಸುವಲ್ಲಿ ಸಾಂವಿಧಾನಿಕ ಅಧಿಕಾರಿಗಳು ಕೂಡ ಭಾಗಿಯಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ” ಎಂದು ಆತಂಕ ವ್ಯಕ್ತಪಡಿಸಿದೆ.

 ಎನ್‌ಸಿಪಿ ನಾಯಕ ಅನಿಲ್ ದೇಶ್‌ಮುಖ್ ವಿರುದ್ಧ ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ನೀಡಿದ್ದ ಭ್ರಷ್ಟಾಚಾರದ ಆರೋಪದ ಬಗ್ಗೆ 15 ದಿನಗಳೊಳಗೆ ಪ್ರಾಥಮಿಕ ತನಿಖೆ ನಡೆಸಲು ಬಾಂಬೆ ಹೈಕೋರ್ಟ್ ಸಿಬಿಐಗೆ ಆದೇಶಿಸಿತ್ತು.

“ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ 10 ವರ್ಷಗಳ ಹಳೆಯ ಭ್ರಷ್ಟಾಚಾರ ಪ್ರಕರಣದಲ್ಲಿ ಅವರ ವಿರುದ್ಧದ ಕ್ರಿಮಿನಲ್ ಮೊಕದ್ದಮೆಗಳನ್ನು ಸುಪ್ರೀಂ ಕೋರ್ಟ್‌ ತಾತ್ಕಾಲಿಕ ತಡೆಹಿಡಿದಿದೆ. ಅನಿಲ್ ದೇಶ್‌ಮುಖ್ ಮತ್ತು ಕರ್ನಾಟಕ ಮುಖ್ಯಮಂತ್ರಿ ಇಬ್ಬರ ವಿಚಾರದಲ್ಲಿ ಏಕೆ ವಿಭಿನ್ನ ನಿರ್ಧಾರಗಳು? ನೈತಿಕತೆಯು ಶಿವಸೇನೆ ಮತ್ತು ಎನ್‌ಸಿಪಿಗೆ ಮಾತ್ರವೇ?” ಎಂದು ಶಿವಸೇನೆ ಪ್ರಶ್ನಿಸಿದೆ.

ಅಧಿಕಾರಾವಧಿಯಲ್ಲಿ ಅಕ್ರಮವಾಗಿ ಭೂಮಿಯ ಡಿ-ನೋಟಿಫೈ ನಡೆಸಿರುವ ಆರೋಪ ಯಡಿಯೂರಪ್ಪ ಮೇಲಿದೆ.

Join Whatsapp
Exit mobile version