ಮನೆಗೆ ಬೆಂಕಿ ಇಟ್ಟು ಆರು ಜನರ ಕೊಂದು ಪರಾರಿಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ

Prasthutha|

ಕೊಡಗು : ಕುಡಿದ ಅಮಲಿನಲ್ಲಿ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ 6 ಜನರನ್ನು ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಯ ಶವ ಕಾಫಿ ತೋಟವೊಂದರಲ್ಲಿ ಪತ್ತೆಯಾಗಿದೆ.

ಪೊನ್ನಂಪೇಟೆ ತಾಲೂಕಿನ ನಾಕೂರು ಸಮೀಪದ ಮುಗುಚಿಕೇರಿ ಗ್ರಾಮದಲ್ಲಿ ಏಪ್ರಿಲ್ 3 ರಂದು ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಆರು ಜನರನ್ನು ಕೊಲೆ ಮಾಡಿದ್ದ ಆರೋಪಿ ಎರವರ ಜೋಜ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ನಾಕೂರು ನರೇಶ್ ಎಂಬುವರಿಗೆ ಸೇರಿದ ಕಾಫಿ ತೋಟದಲ್ಲಿ ಇಂದು ಬೋಜನ ಮೃತದೇಹ ಪತ್ತೆಯಾಗಿದೆ ಎನ್ನಲಾಗಿದೆ.

- Advertisement -

ಅಳಿಯನ ಮನೆಯಲ್ಲಿ ಮಲಗಿದ್ದ ತನ್ನ ಪತ್ನಿ ಹಾಗೂ ಇತರ 6 ಮಂದಿಯ ಮೇಲೆ ಮನೆಯ ಬಾಗಿಲು ಹಾಕಿಕೊಂಡು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದ. ಆರೋಪಿಯನ್ನು ಪತ್ತೆ ಹಚ್ಚಲು ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ಈ ನಡುವೆ ಬೋಜನ ದೇಹ ಕಾಫಿ ತೋಟವೊಂದರಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಘಟನೆ ನಡೆದ ದಿನವೇ ಈತ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ.

- Advertisement -