Home ಕರಾವಳಿ ಬೆಳ್ತಂಗಡಿ: ನವವಿವಾಹಿತನ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಳ್ತಂಗಡಿ: ನವವಿವಾಹಿತನ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಉಪ್ಪಿನಂಗಡಿ : ನವ ವಿವಾಹಿತನೋರ್ವನ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಉಪ್ಪಿನಂಗಡಿ ಸಮೀಪದ ಕುದ್ರಡ್ಕ ಬಳಿ ಪತ್ತೆಯಾಗಿದೆ.


ಮೃತ ವ್ಯಕ್ತಿಯನ್ನು ಕುದ್ರಡ್ಕ ಸುಲೈಮಾನ್ ಎಂಬವರ ಪುತ್ರ ನಾಸಿರ್ ( 27 ) ಎಂದು ಗುರುತಿಸಲಾಗಿದೆ.
ಬೆಂಗಳೂರಿನಲ್ಲಿ ತರಕಾರಿ ವ್ಯಾಪಾರ ಮಾಡುತ್ತಿದ್ದ ನಾಸಿರ್, ಕಳೆದ ವಾರವಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.


ನಾಸಿರ್ ಅವರು ಈ ಹಿಂದೆ ನರದ ಸಮಸ್ಯೆಯಿಂದ ಬಳಲುತ್ತಿದ್ದರು. ಅದಕ್ಕೆ ಚಿಕಿತ್ಸೆಯನ್ನೂ ಪಡೆದಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ.
ಪುಂಜಾಲಕಟ್ಟೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Join Whatsapp
Exit mobile version