ಬಿಜೆಪಿ ಮುಖಂಡ, ಮಾಜಿ ಸಚಿವ ರಾಜಿಂದರ್ ಪಾಲ್ ರವರ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

Prasthutha|

ರಾಜಾನಂದಗಾಂವ್: ಬಿಜೆಪಿ ಹಿರಿಯ ಮುಖಂಡ, ಛತ್ತೀಸಗಢ ಮಾಜಿ ಸಚಿವ ರಾಜಿಂದರ್ ಪಾಲ್ ಸಿಂಗ್ ಭಾಟಿಯಾ ಅವರ ಮೃತದೇಹ ತಮ್ಮ ರಾಜಾನಂದಗಾವ್ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

- Advertisement -

ಈ ವರ್ಷದ ಮಾರ್ಚ್ ತಿಂಗಳಲ್ಲಿ ಭಾಟಿಯಾ ಅವರು ಕೋವಿಡ್ ಸೋಂಕಿಗೆ ಒಳಗಾಗಿದ್ದರು, ಸೋಂಕಿನಿಂದ ಗುಣಮುಖರಾಗಿದ್ದರೂ ಅವರಿಗೆ ಅನಾರೋಗ್ಯ ಕಾಡುತ್ತಿತ್ತು ಎಂದು ಬಿಜೆಪಿ ಮುಖಂಡರು ಹೇಳಿದ್ದಾರೆ.

ಖುಜ್ಜಿ ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿ ಭಾಟಿಯಾ ಆಯ್ಕೆಯಾಗಿದ್ದರು. ರಮಣ್ ಸಿಂಗ್ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಭಾಟಿಯಾ ಸಚಿವರಾಗಿ ಕೆಲಸ ಮಾಡಿದ್ದರು.

ಸ್ಥಳದಲ್ಲಿ ಡೆತ್ ನೋಟ್ ವಶಪಡಿಸಿಕೊಂಡಿದ್ದಾರೆಯೇ ಇಲ್ಲವೇ ಎಂಬುದನ್ನು ಪೊಲೀಸರು ಇನ್ನೂ ಖಚಿತ ಪಡಿಸಿಲ್ಲ.

- Advertisement -