ಬಾಲಕನ ಮೇಲೆ ಸ್ನೇಹಿತರಿಂದ ಲೈಂಗಿಕ ದೌರ್ಜನ್ಯ; ಇಬ್ಬರ ಬಂಧನ

ನವದೆಹಲಿ: 10 ವರ್ಷದ ಬಾಲಕನ ಮೇಲೆ ಆತನ ಮೂವರು ಸ್ನೇಹಿತರು ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ದೆಹಲಿಯ ಸೀಲಂಪುರ ಪ್ರದೇಶದಲ್ಲಿ ನಡೆದಿದೆ.

ಸಂತ್ರಸ್ತ ಬಾಲಕನನ್ನು ಎಲ್ಎನ್ ಜೆಪಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಪಿಗಳ ಪೈಕಿ ಇಬ್ಬರನ್ನು ಬಂಧಿಸಿ ಬಾಲನ್ಯಾಯ ಮಂಡಳಿಯ ಮುಂದೆ ಹಾಜರುಪಡಿಸಲಾಗಿದೆ. ಮೂರನೆಯವನನ್ನು ಬಂಧಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

ಒಂದೇ ವಯಸ್ಸಿನ ಮೂವರು ಸ್ನೇಹಿತರು ಬಾಲಕನ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿದ್ದಲ್ಲದೆ, ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಬಾಲಕನ ತಾಯಿ ಪೊಲೀಸರಿಗೆ ದೂರು ನೀಡಿದ್ದರು. ತಾಯಿಯ ಹೇಳಿಕೆಯ ಆಧಾರದ ಮೇಲೆ ಐಪಿಸಿ ಸೆಕ್ಷನ್ 377/34 ಮತ್ತು ಪೋಸ್ಕೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಈ ಬಗ್ಗೆ ಪೊಲೀಸರಿಗೆ ನೋಟಿಸ್ ಜಾರಿ ಮಾಡಿರುವ ದೆಹಲಿ ಮಹಿಳಾ ಆಯೋಗವು ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದೆ.

ಸಂತ್ರಸ್ತ ಬಾಲಕ ಮತ್ತು ಆರೋಪಿಗಳು ನೆರೆಹೊರೆಯವರಾಗಿದ್ದು, 10-12 ವರ್ಷ ವಯಸ್ಸಿನ ಒಂದೇ ವಯಸ್ಸಿನವರು. ಅವರು ಒಂದೇ ಸಮುದಾಯಕ್ಕೆ ಸೇರಿದವರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -