Home ಟಾಪ್ ಸುದ್ದಿಗಳು ವೃದ್ಧ ದಂಪತಿಯ ಬರ್ಬರ ಕೊಲೆ

ವೃದ್ಧ ದಂಪತಿಯ ಬರ್ಬರ ಕೊಲೆ

ಚಿತ್ರದುರ್ಗ: ಮನೆಯಲ್ಲಿದ್ದ ವೃದ್ಧ ದಂಪತಿಯ ಕತ್ತು ಕೊಯ್ದು ಕೊಲೆಗೈದಿರುವ ಕೃತ್ಯ ಹೊಸದುರ್ಗದ ವಿನಾಯಕ ಬಡಾವಣೆಯಲ್ಲಿ ನಡೆದಿದೆ.

ವಿನಾಯಕ ಬಡಾವಣೆಯ ಪ್ರಭಾಕರ್ ಶೆಟ್ರು (75) ವಿಜಯಲಕ್ಷ್ಮಿ (65) ಕೊಲೆಯಾದ ವೃದ್ಧ ದಂಪತಿ.

ವೃದ್ಧ ದಂಪತಿ ಮನೆಯಲ್ಲಿ ಇಬ್ಬರೇ ಇರುವುದನ್ನು ಖಚಿತಪಡಿಸಿಕೊಂಡ ದುಷ್ಕರ್ಮಿಗಳು ಅವರ ಕತ್ತು ಕೊಯ್ದು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಕೊಲೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ.

ವೃದ್ಧ ದಂಪತಿಗೆ ಇಬ್ಬರು ಹೆಣ್ಣು ಮಕ್ಕಳಿದ್ದು, ಚಿಕ್ಕನಾಯಕನಹಳ್ಳಿ ಹಾಗೂ ದಾವಣಗೆರೆಗೆ ಮದುವೆ ಮಾಡಿ ಕೊಟ್ಟಿದ್ದರು. ಮನೆಯಲ್ಲಿ ವೃದ್ಧ ದಂಪತಿ ಮಾತ್ರವೇ ವಾಸವಾಗಿದ್ದರು. ಹೊಸದುರ್ಗದಲ್ಲಿ ಅಡುಗೆ ಎಣ್ಣೆ ವ್ಯಾಪಾರ ಮಾಡುತ್ತಿದ್ದ ಪ್ರಭಾಕರ್ ಶೆಟ್ರು ಮೇಲಿನ ವೈಯಕ್ತಿಕ ದ್ವೇಷದಿಂದ ಹತ್ಯೆಗೈದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಆದರೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಹೊಸದುರ್ಗ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿ ದುಷ್ಕರ್ಮಿಗಳ ಪತ್ತೆಗೆ ಶೋಧ ಕೈಗೊಂಡಿದ್ದಾರೆ.

Join Whatsapp
Exit mobile version