ಒಡಿಶಾ ರೈಲು ದುರಂತದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ಬಸ್​ ಅಪಘಾತ| ಹಲವರು ಗಂಭೀರ

Prasthutha|

ಹೊಸದಿಲ್ಲಿ: ಒಡಿಶಾದ ರೈಲು ದುರಂತದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ಬಸ್​ ಅಪಘಾತಕ್ಕೀಡಾಗಿ, ರೋಗಿಗಳಿಗೆ ಮತ್ತಷ್ಟು ಗಾಯಗಳಾದ ಘಟನೆ ನಡೆದಿದೆ.

- Advertisement -

ಬಾಲಸೋರ್‌ನಲ್ಲಿ ಸಂಭವಿಸಿದ ರೈಲು ಅಪಘಾತದಲ್ಲಿ ಸಣ್ಣಪುಟ್ಟ ಗಾಯಗೊಂಡ ಪ್ರಯಾಣಿಕರನ್ನು ಚಿಕಿತ್ಸೆಗಾಗಿ ಬಂಗಾಳದ ವಿವಿಧ ಜಿಲ್ಲೆಗಳಿಗೆ ಕಳುಹಿಸಲಾಗುತ್ತಿದೆ. ಈ ಮಧ್ಯೆ, ಮಾರ್ಗಮಧ್ಯೆ ಮೇದಿನಿಪುರ ಬಳಿ ಈ ಬಸ್ ಪಿಕಪ್ ವ್ಯಾನ್‌ಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಈ ಡಿಕ್ಕಿಯಿಂದಾಗಿ ಬಸ್ಸಿನಲ್ಲಿದ್ದ ಹಲವರಿಗೆ ಗಂಭೀರ ಗಾಯಗಳಾಗಿವೆ ಎಂದು ಹೇಳಲಾಗಿದೆ.

ರೈಲು ದುರಂತದ ಸಂತ್ರಸ್ತರನ್ನು ಕರೆದೊಯ್ಯುತ್ತಿದ್ದ ಬಸ್ ಮತ್ತು ವ್ಯಾನ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬಸ್ಸಿನಲ್ಲಿದ್ದ ಹಲವರ ಸ್ಥಿತಿ ಗಂಭೀರವಾಗಿದೆ. ಇನ್ನೂ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.

- Advertisement -

ಗಂಭೀರವಾಗಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ವೈದ್ಯರು ಚಿಕಿತ್ಸೆಯನ್ನು ಮುಂದುವರಿಸಿದ್ದಾರೆ. ಸಣ್ಣಪುಟ್ಟ ಗಾಯಗೊಂಡವರಿಗೂ ಚಿಕಿತ್ಸೆ ನೀಡಲಾಗುತ್ತಿದೆ.

Join Whatsapp