Home ಜಾಲತಾಣದಿಂದ ಒಡಿಶಾ ರೈಲು ದುರಂತದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ಬಸ್​ ಅಪಘಾತ| ಹಲವರು ಗಂಭೀರ

ಒಡಿಶಾ ರೈಲು ದುರಂತದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ಬಸ್​ ಅಪಘಾತ| ಹಲವರು ಗಂಭೀರ

ಹೊಸದಿಲ್ಲಿ: ಒಡಿಶಾದ ರೈಲು ದುರಂತದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ಬಸ್​ ಅಪಘಾತಕ್ಕೀಡಾಗಿ, ರೋಗಿಗಳಿಗೆ ಮತ್ತಷ್ಟು ಗಾಯಗಳಾದ ಘಟನೆ ನಡೆದಿದೆ.

ಬಾಲಸೋರ್‌ನಲ್ಲಿ ಸಂಭವಿಸಿದ ರೈಲು ಅಪಘಾತದಲ್ಲಿ ಸಣ್ಣಪುಟ್ಟ ಗಾಯಗೊಂಡ ಪ್ರಯಾಣಿಕರನ್ನು ಚಿಕಿತ್ಸೆಗಾಗಿ ಬಂಗಾಳದ ವಿವಿಧ ಜಿಲ್ಲೆಗಳಿಗೆ ಕಳುಹಿಸಲಾಗುತ್ತಿದೆ. ಈ ಮಧ್ಯೆ, ಮಾರ್ಗಮಧ್ಯೆ ಮೇದಿನಿಪುರ ಬಳಿ ಈ ಬಸ್ ಪಿಕಪ್ ವ್ಯಾನ್‌ಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಈ ಡಿಕ್ಕಿಯಿಂದಾಗಿ ಬಸ್ಸಿನಲ್ಲಿದ್ದ ಹಲವರಿಗೆ ಗಂಭೀರ ಗಾಯಗಳಾಗಿವೆ ಎಂದು ಹೇಳಲಾಗಿದೆ.

ರೈಲು ದುರಂತದ ಸಂತ್ರಸ್ತರನ್ನು ಕರೆದೊಯ್ಯುತ್ತಿದ್ದ ಬಸ್ ಮತ್ತು ವ್ಯಾನ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬಸ್ಸಿನಲ್ಲಿದ್ದ ಹಲವರ ಸ್ಥಿತಿ ಗಂಭೀರವಾಗಿದೆ. ಇನ್ನೂ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.

ಗಂಭೀರವಾಗಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ವೈದ್ಯರು ಚಿಕಿತ್ಸೆಯನ್ನು ಮುಂದುವರಿಸಿದ್ದಾರೆ. ಸಣ್ಣಪುಟ್ಟ ಗಾಯಗೊಂಡವರಿಗೂ ಚಿಕಿತ್ಸೆ ನೀಡಲಾಗುತ್ತಿದೆ.

Join Whatsapp
Exit mobile version