ದ. ಕ ಜಿಲ್ಲೆ ಸೇರಿದಂತೆ ಎಲ್ಲಾ ಗಡಿ ಜಿಲ್ಲೆಗಳಲ್ಲಿ ವಾರಾಂತ್ಯ ಕರ್ಫ್ಯೂ ರದ್ದು

Prasthutha|

ಬೆಂಗಳೂರು: ರಾಜ್ಯದ ಗಡಿ ಜಿಲ್ಲೆಗಳಲ್ಲಿದ್ದ ವೀಕೆಂಡ್ ಕರ್ಫ್ಯೂವನ್ನ ರದ್ದುಗೊಳಿಸಿ ರಾಜ್ಯ ಸರಕಾರ ಮಹತ್ವದ ಆದೇಶ ಹೊರಡಿಸಿದೆ. ಗಡಿ ಜಿಲ್ಲೆಗಳಲ್ಲಿ ಪಾಸಿಟಿವಿಟಿ ದರ ಶೇ.2ಕ್ಕಿಂತ ಕಡಿಮೆಯಿದ್ದ ಹಿನ್ನೆಲೆಯಲ್ಲಿ ವಾರಾಂತ್ಯ ಕರ್ಫ್ಯೂ ರದ್ದು ಪಡಿಸಿದೆ.

- Advertisement -


ದಕ್ಷಿಣ ಕನ್ನಡ, ಚಾಮರಾಜನಗರ, ಕೊಡಗು ಸೇರಿದಂತೆ ಹಲವು ಗಡಿ ಜಿಲ್ಲೆಗಳಲ್ಲಿದ್ದ ವೀಕೆಂಡ್ ಕರ್ಫ್ಯೂ ರದ್ದುಗೊಳಿಸಲಾಗಿದೆ. ವಾರಾಂತ್ಯ ಕರ್ಫ್ಯೂ ರದ್ದುಗೊಳಿಸುವಂತೆ ಗಡಿ ಜಿಲ್ಲೆಗಳಲ್ಲಿ ಶಾಸಕರ, ಸಚಿವರು ಸರಕಾರವನ್ನ ಒತ್ತಾಯಿಸಿದ್ದರು.

ಆದಾಗ್ಯೂ ಆಯಾ ಜಿಲ್ಲಾಧಿಕಾರಿಗಳು ಅಲ್ಲಿನ ಪರಿಸ್ಥಿತಿ ನೋಡಿಕೊಂಡು ಕರ್ಫ್ಯೂ ರದ್ದುಗೊಳಿಸುವ ಸಂಬಂಧ ತೀರ್ಮಾನ ಕೈಗೊಳ್ಳಬಹುದು.

- Advertisement -

ಕೇರಳ ಮತ್ತು ಮಹಾರಾಷ್ಟ್ರ ಗಡಿ ಜಿಲ್ಲೆಗಳಲ್ಲಿ ಹೆಚ್ಚಿನ ನಿಗಾವಹಿಸಲು ಸರ್ಕಾರ ಆಯಾ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದೆ.

ರಾಜ್ಯದಲ್ಲಿ ಪಾಸಿಟಿವಿಟಿ ರೇಟ್ ಇಳಿಮುಖ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.  ರಾಜ್ಯದ ಸರಾಸರಿ ಪಾಸಿಟಿವಿಟಿ ರೇಟ್ ಶೇ. 0.73ರಷ್ಟಿದೆ. ವೀಕೆಂಡ್ ಕರ್ಫ್ಯೂ ಹೇರಿಕೆ‌ ಮಾಡಲಾಗಿದ್ದ ಜಿಲ್ಲೆಗಳಲ್ಲಿ ಶೇ. 2ಕ್ಕಿಂತ ಕಡಿಮೆ ಪಾಸಿಟಿವಿಟಿ ರೇಟ್ ಇತ್ತು. ಇದೀಗ ಕಡಿಮೆಯಾಗಿದೆ. ಈ‌ ಹಿನ್ನೆಲೆ ವೀಕೆಂಡ್ ಕರ್ಫ್ಯೂ ಆದೇಶ ರದ್ದು ಮಾಡಲಾಗಿದೆ.

ಸೋಂಕು ಹೆಚ್ಚಳ‌ ಆದರೆ ವೀಕೆಂಡ್ ಕರ್ಫ್ಯೂ ಜಾರಿಗೆ ಆಯಾ ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಲಾಗಿದೆ. 



Join Whatsapp