ಸಾರ್ವಜನಿಕರನ್ನು ಖಾಲಿ ಹೊಟ್ಟೆಯಲ್ಲಿ ಮಲಗುವಂತೆ ಮಾಡುತ್ತಿರುವ ಕೇಂದ್ರ ಸರ್ಕಾರ: ರಾಹುಲ್ ವಾಗ್ದಾಳಿ

Prasthutha|

ನವದೆಹಲಿ: ಗ್ಯಾಸ್ ಸಿಲಿಂಡರ್ ದರ ಏರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ‘ಸಾರ್ವಜನಿಕರನ್ನು ಖಾಲಿ ಹೊಟ್ಟೆಯಲ್ಲಿ ಮಲಗುವಂತೆ ಮಾಡುತ್ತಿರುವವರು, ತಾವು ಮಾತ್ರ ಸ್ನೇಹಿತರ ನೆರಳಿನಲ್ಲಿ ಮಲಗುತ್ತಿದ್ದಾರೆ’ ಎಂದು ಟೀಕಿಸಿದ್ದಾರೆ.

ಈ ಬಗ್ಗೆ “#IndiaAgainstBJPLoot” ಹ್ಯಾಷ್ ಟ್ಯಾಗ್‌ ನೊಂದಿಗೆ ಟ್ವೀಟ್‌ ಮಾಡಿರುವ ಅವರು, ದೇಶದ ನಾಲ್ಕು ಮಹಾನಗರಗಳಲ್ಲಿ ಕಳೆದ ಜನವರಿಯಿಂದ ಗೃಹಬಳಕೆಯ ಎಲ್‌ಪಿಜಿ ದರ ಹೆಚ್ಚಿಸಿರುವ ಪಟ್ಟಿಯನ್ನೂ ಟ್ಯಾಗ್‌ ಮಾಡಿದ್ದಾರೆ.  ‘ಜನರಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ದೇಶದ ಜನರು ಒಗ್ಗಟ್ಟಿನಿಂದ ಹೋರಾಡಲಿದ್ದಾರೆ’ ಎಂದು ಹೇಳಿದ್ದಾರೆ.

- Advertisement -