Home ಟಾಪ್ ಸುದ್ದಿಗಳು ಸಾರ್ವಜನಿಕರನ್ನು ಖಾಲಿ ಹೊಟ್ಟೆಯಲ್ಲಿ ಮಲಗುವಂತೆ ಮಾಡುತ್ತಿರುವ ಕೇಂದ್ರ ಸರ್ಕಾರ: ರಾಹುಲ್ ವಾಗ್ದಾಳಿ

ಸಾರ್ವಜನಿಕರನ್ನು ಖಾಲಿ ಹೊಟ್ಟೆಯಲ್ಲಿ ಮಲಗುವಂತೆ ಮಾಡುತ್ತಿರುವ ಕೇಂದ್ರ ಸರ್ಕಾರ: ರಾಹುಲ್ ವಾಗ್ದಾಳಿ

ನವದೆಹಲಿ: ಗ್ಯಾಸ್ ಸಿಲಿಂಡರ್ ದರ ಏರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ‘ಸಾರ್ವಜನಿಕರನ್ನು ಖಾಲಿ ಹೊಟ್ಟೆಯಲ್ಲಿ ಮಲಗುವಂತೆ ಮಾಡುತ್ತಿರುವವರು, ತಾವು ಮಾತ್ರ ಸ್ನೇಹಿತರ ನೆರಳಿನಲ್ಲಿ ಮಲಗುತ್ತಿದ್ದಾರೆ’ ಎಂದು ಟೀಕಿಸಿದ್ದಾರೆ.

ಈ ಬಗ್ಗೆ “#IndiaAgainstBJPLoot” ಹ್ಯಾಷ್ ಟ್ಯಾಗ್‌ ನೊಂದಿಗೆ ಟ್ವೀಟ್‌ ಮಾಡಿರುವ ಅವರು, ದೇಶದ ನಾಲ್ಕು ಮಹಾನಗರಗಳಲ್ಲಿ ಕಳೆದ ಜನವರಿಯಿಂದ ಗೃಹಬಳಕೆಯ ಎಲ್‌ಪಿಜಿ ದರ ಹೆಚ್ಚಿಸಿರುವ ಪಟ್ಟಿಯನ್ನೂ ಟ್ಯಾಗ್‌ ಮಾಡಿದ್ದಾರೆ.  ‘ಜನರಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ದೇಶದ ಜನರು ಒಗ್ಗಟ್ಟಿನಿಂದ ಹೋರಾಡಲಿದ್ದಾರೆ’ ಎಂದು ಹೇಳಿದ್ದಾರೆ.

Join Whatsapp
Exit mobile version