ಕರ್ನಾಟಕದ ರಸ್ತೆ ಅಭಿವೃದ್ಧಿಗಾಗಿ ಕೇಂದ್ರದಿಂದ 8 ಸಾವಿರ ಕೋಟಿ ರೂ. ಮಂಜೂರು: ಪ್ರಲ್ಹಾದ್ ಜೋಶಿ

Prasthutha|

ಬೆಂಗಳೂರು: ಕರ್ನಾಟಕದಲ್ಲಿ ರಸ್ತೆ ಅಭಿವೃದ್ಧಿ ಮತ್ತು ಹೊಸ ರಸ್ತೆಗಳ ನಿರ್ಮಾಣಕ್ಕಾಗಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ 2024-25ರ ಅವಧಿಗೆ 8,021 ಕೋಟಿ ರೂ. ಅನುದಾನ ಮಂಜೂರು ಮಾಡಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ.

- Advertisement -

ಈ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಸಂದೇಶ ಪ್ರಕಟಿಸುವ ಮೂಲಕ ಅವರು ಮಾಹಿತಿ ನೀಡಿದ್ದಾರೆ. ಈಗ ಕೂಡಲೇ ವಿಸ್ತೃತ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸಿ ಟೆಂಡರ್ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ ಕಾಮಗಾರಿಗಳಿಗೆ ಚಾಲನೆ ನೀಡುವ ಜವಾಬ್ದಾರಿ ರಾಜ್ಯ ಸರ್ಕಾರದ ಮೇಲೆ ಇದೆ ಎಂದೂ ಅವರು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರಾಜ್ಯದ ಒಟ್ಟು 470 ಕಿಲೋಮೀಟರ್ ರಸ್ತೆ ಅಭಿವೃದ್ಧಿಗಾಗಿ ಕೇಂದ್ರ ರಸ್ತೆ ಮತ್ತು ಹೆದ್ದಾರಿ ಸಚಿವಾಲಯದಿಂದ 2024-25ರ ಅವಧಿಗೆ 8006 ಕೋಟಿ ರೂಪಾಯಿ ಮಂಜೂರು ಮಾಡಿದೆ. ಅದಲ್ಲದೇ ಹೊಸದಾಗಿ 459 ಕಿಲೋ ಮೀಟರ್ ಉದ್ದದ ಹೊಸ ರಸ್ತೆ ನಿರ್ಮಾಣಕ್ಕೆ ವಿಸ್ತೃತ ಯೋಜನಾ ವರದಿಯನ್ನು ಸಿದ್ದಪಡಿಸಲು 15 ಕೋಟಿ ರೂ. ಮಂಜೂರು ಮಾಡಿದೆ ಎಂದು ಅವರು ತಿಳಿಸಿದ್ದಾರೆ.

Join Whatsapp