Home ಟಾಪ್ ಸುದ್ದಿಗಳು ಯತ್ನಾಳ್ ಕಾರ್ಖಾನೆಗೆ ಕೇಂದ್ರವೇ 1.5 ಕೋಟಿ ರೂ. ದಂಡ ವಿಧಿಸಿತ್ತು: ಸಚಿವ ಈಶ್ವರ ಖಂಡ್ರೆ

ಯತ್ನಾಳ್ ಕಾರ್ಖಾನೆಗೆ ಕೇಂದ್ರವೇ 1.5 ಕೋಟಿ ರೂ. ದಂಡ ವಿಧಿಸಿತ್ತು: ಸಚಿವ ಈಶ್ವರ ಖಂಡ್ರೆ

ಕಲಬುರಗಿ: ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರ ಸಕ್ಕರೆ ಹಾಗೂ ಇಥೆನಾಲ್ ಕಾರ್ಖಾನೆಗೆ ಕೇಂದ್ರ ಪರಿಸರ ಸಚಿವಾಲಯವೇ ಒಂದೂವರೆ ವರ್ಷದ ಹಿಂದೆ 1.5 ಕೋಟಿ ರೂ. ದಂಡ ವಿಧಿಸಿತ್ತು. ಅದನ್ನು ಪಾವತಿಸಿದ ಬಳಿಕವೂ ಅಗತ್ಯ ಅನುಮತಿ ಪಡೆದಿರಲಿಲ್ಲ ಎಂದು ಸಚಿವ ಈಶ್ವರ ಖಂಡ್ರೆ ಟೀಕಿಸಿದರು.


ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಾರದ ಹಿಂದೆ ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಲ ಮತ್ತು ವಾಯು ಮಾಲಿನ್ಯ ಮಾಡುವ ಕಾರ್ಖಾನೆಗಳ ಬಗ್ಗೆ ವರದಿ ನೀಡುವಂತೆ ಸೂಚಿಸಿದ್ದೆ. ಅದರಂತೆ ಇದೀಗ ರಾಜ್ಯದ ವಿವಿಧ ಕಾರ್ಖಾನೆಗಳು ಕಾಯ್ದೆ ಉಲ್ಲಂಘಿಸಿದ್ದರಿಂದ ಕಾನೂನು ರೀತಿಯಲ್ಲಿ ನೋಟಿಸ್ ನೀಡಲಾಗಿದೆ. ಅದರಲ್ಲಿ ಯತ್ನಾಳ್ ಅವರಿಗೆ ಸೇರಿದ ಕಾರ್ಖಾನೆಗೆ ಪ್ರತ್ಯೇಕವಾಗಿ ಕೊಟ್ಟಿಲ್ಲ. ಇದರಲ್ಲಿ ಯಾವುದೇ ರಾಜಕೀಯವಿಲ್ಲ. ಕಾಂಗ್ರೆಸ್ ಸರ್ಕಾರ ರಾಜಕೀಯ ಮಾಡುತ್ತಿದೆ ಎಂಬ ಯತ್ನಾಳ್ ಹೇಳಿಕೆಯೇ ಹಾಸ್ಯಾಸ್ಪದ ಎಂದು ಟೀಕಿಸಿದರು.

Join Whatsapp
Exit mobile version