ಮುಂಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿ ಜಯಿಸಿರುವ ಭಾರತ ಕ್ರಿಕೆಟ್ ತಂಡದ ಆಟಗಾರರು ದುಬೈನಿಂದ ಭಾರತಕ್ಕೆ ವಾಪಸ್ಸಾದರು. ವಿವಿಧ ವಿಮಾನ ನಿಲ್ದಾಣಗಳಿಗೆ ಬಂದಿಳಿದ ನೆಚ್ಚಿನ ಆಟಗಾರರರಿಗೆ ಅಭಿಮಾನಿಗಳು ಅದ್ಧೂರಿ ಸ್ವಾಗತ ಕೋರಿದರು.
ಪಾಕಿಸ್ತಾನ ಆತಿಥ್ಯ ವಹಿಸಿದ್ದರೂ ದುಬೈನಲ್ಲಿ ತನ್ನ ಎಲ್ಲ ಪಂದ್ಯಗಳನ್ನು ಆಡಿದ ಭಾರತ ತಂಡ ಸೋಲರಿಯದ ಸರದಾರನಾಗಿ ಟ್ರೋಫಿ ಜಯಿಸಿತು. ಫೈನಲ್ ಪಂದ್ಯದಲ್ಲಿ ಕಠಿಣ ಎದುರಾಳಿ ನ್ಯೂಜಿಲ್ಯಾಂಡ್ ಅನ್ನು ಮಣಿಸಿತು. ಈ ಮೂಲಕ 9 ತಿಂಗಳ ಅಂತರದಲ್ಲಿ ಎರಡು ಐಸಿಸಿ ಟೂರ್ನಿಗಳನ್ನು ಗೆದ್ದುಕೊಂಡಿತು.
ಭಾರತ ತಂಡದ ನಾಯಕ ರೋಹಿತ್ ಶರ್ಮಾ, ಶ್ರೇಯಸ್ ಅಯ್ಯರ್, ಹಾರ್ದಿಕ್ ಪಾಂಡ್ಯ ಮುಂಬೈನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದರು. ನೆರೆದಿದ್ದ ಅಭಿಮಾನಿಗಳು ಘೋಷಣೆ ಕೂಗುವ ಮೂಲಕ ಚಾಂಪಿಯನ್ನರನ್ನು ಸ್ವಾಗತಿಸಿದರು.
ರವೀಂದ್ರ ಜಡೇಜಾ, ವರುಣ್ ಚಕ್ರವರ್ತಿ ಚೆನ್ನೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಅಕ್ಷರ್ ಪಟೇಲ್ ಗುಜರಾತ್ ವಿಮಾನ ನಿಲ್ದಾಣ, ವೇಗದ ಬೌಲರ್ ಹರ್ಷಿತ್ ರಾಣಾ ದೆಹಲಿ ವಿಮಾನ ನಿಲ್ದಾಣಕ್ಕೆ ಬಂದಿಳಿದರು.