ಬಂಟ್ವಾಳ: ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಪ್ರಯುಕ್ತ ಮಂಗಳೂರು ಮಹಾ ನಗರಕ್ಕೆ ಕುಡಿಯುವ ನೀರು ಪೂರೈಕೆ ಮಾಡುವ ತುಂಬೆ ಅಣೆಕಟ್ಟನ್ನು ತ್ರಿವರ್ಣ ಬೆಳಕಿನ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿದ್ದು, ಜನರ ಗಮನ ಸೆಳೆಯುತ್ತಿದೆ.
ಅಗಸ್ಟ್ 13 ರಿಂದ ಅಗಸ್ಟ್ 15 ರವರೆಗೆ ಬಂಟವಾಳ ಬಂಟರ ಭವನದ ಕೆಳಅಂತಸ್ತಿನಿಂದ ಸಂಜೆ 6 ರಿಂದ 9 ರವರೆಗೆ ಈ ಸುಂದರ ದೃಶ್ಯವನ್ನು ಸಾರ್ವಜನಿಕರು ವೀಕ್ಷಣೆ ಮಾಡಬಹುದು ಎಂದು ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಪ್ರೇಮಾನಂದ ಶೆಟ್ಟಿ ಹೇಳಿದ್ದಾರೆ.