ಆರೆಸ್ಸೆಸ್, ಕಾಂಗ್ರೆಸ್ ದೇಶವನ್ನು ಒಡೆಯುತ್ತಿದೆ: ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ

Prasthutha|

ವಿಜಯಪುರ: ಪ್ರಸಕ್ತ ದೇಶದಲ್ಲಿ ಅಸ್ತಿತ್ವದಲ್ಲಿರುವ ಕಾಂಗ್ರೆಸ್ ಮತ್ತು ಆರೆಸ್ಸೆಸ್ ದೇಶವನ್ನು ಧರ್ಮದ ಆಧಾರದಲ್ಲಿ ಒಡೆಯುತ್ತಿದೆ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಆರೋಪಿಸಿದ್ದಾರೆ.

- Advertisement -

ಇಂದು ವಿರಕ್ತಮಠದಲ್ಲಿ ಸಿಂಧಗಿ ಉಪ ಚುನಾವಣೆ ಪ್ರಯುಕ್ತ ಏರ್ಪಡಿಸಿದ್ದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡುತ್ತಾ ದೇವೇಗೌಡರು ಆರೆಸ್ಸೆಸ್ ಮತ್ತು ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ನಾನು ದೇಶದ ಪ್ರಧಾನಿ ಹುದ್ದೆಯನ್ನು ಅಲಂಕರಿಸಿದ ಸಂದರ್ಭದಲ್ಲಿ ದೇಶದಲ್ಲಿ ಒಂದೇ ಒಂದು ಕೋಮು ಗಲಭೆ ನಡೆದಿಲ್ಲ. ಪ್ರತಿಯೊಬ್ಬರನ್ನೂ ವಿಶ್ವಾಸಕ್ಕೆ ತೆಗೆದುಕೊಂಡರೆ ದೇಶದಲ್ಲಿ ಯಾವುದೇ ಸಮಸ್ಯೆ ಉಂಟಾಗುವುದಿಲ್ಲ ಎಂದು ನುಡಿದರು.

- Advertisement -

ದೇಶದಲ್ಲಿ ಪ್ರಸಕ್ತ ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿಯಿದ್ದು, ಈ ನಿಟ್ಟಿನಲ್ಲಿ 135 ಇತಿಹಾಸದ ಕಾಂಗ್ರೆಸ್ ಮತ್ತು 96 ವರ್ಷದ ಆರೆಸ್ಸೆಸ್ ಆತ್ಮಾವಲೋಕನ ನಡೆಸಲಿ ಎಂದು ತಿಳಿಸಿದರು.

Join Whatsapp