ಸಚಿವ ಮಧು ಬಂಗಾರಪ್ಪಗೆ ಬೃಹತ್ ಮೊತ್ತ ಕಟ್ಟಲು ತೀರ್ಪು ನೀಡಿದ ಕೋರ್ಟ್: ಇಲ್ಲದಿದ್ದಲ್ಲಿ ಜೈಲು!

Prasthutha|

ಬೆಂಗಳೂರು: ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ 2011ರ ಚೆಕ್‌ಬೌನ್ಸ್‌ ಪ್ರಕರಣಕ್ಕೆ ಸಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ. ಬೃಹತ್ ಮೊತ್ತವಾದ 6 ಕೋಟಿ 96 ಲಕ್ಷ ರೂ. ದಂಡವನ್ನು ಕಟ್ಟಬೇಕು. ದಂಡ ಪಾವತಿ ಮಾಡದಿದ್ದರೆ 6 ತಿಂಗಳು ಜೈಲುವಾಸ ಅನುಭವಿಸುವಂತೆ ಆದೇಶಿಸಿದೆ.

- Advertisement -

ಮಧು ಬಂಗಾರಪ್ಪ ಆಕಾಶ್ ಆಡಿಯೋ ಕಂಪನಿಯ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಸಮಯದಲ್ಲಿ ರಾಜೇಶ್ ಎಕ್ಸ್ ಪೋರ್ಟ್ ಸಂಸ್ಥೆಗೆ ನೀಡಲಾಗಿದ್ದ 6.60 ಕೋಟಿ ರೂಪಾಯಿ ಮೌಲ್ಯದ ಚೆಕ್ ಬೌನ್ಸ್‌ ಆಗಿತ್ತು. ಈ ಬಗ್ಗೆ ವಿಚಾರಣೆ ಮಾಡಿದಾಗ ಉಡಾಫೆಯಾಗಿ ವರ್ತಿಸಿದ್ದಾರೆಂದು ಮಧು ಬಂಗಾರಪ್ಪ ವಿರುದ್ಧ ರಾಜೇಶ್‌ ಎಕ್ಸ್‌ಪೋರ್ಟ್‌ ಸಂಸ್ಥೆಯಿಂದ ಚೆಕ್‌ಬೌನ್ಸ್‌ ಪ್ರಕರಣವನ್ನು ದಾಖಲಿಸಲಾಗಿತ್ತು. ಈ ಪ್ರಕರಣದ ಅರ್ಜಿಯನ್ನು ವಿಚಾರಣೆ ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಈ ತೀರ್ಪು ನೀಡಿದೆ.

ನ್ಯಾಯಾಲಯ ವಿಧಿಸಿದ 6.96 ಕೋಟಿ ರೂ. ಹಣದಲ್ಲಿ 6,96,60,000 ರೂ. ಹಣವನ್ನು ದೂರುದಾರರಿಗೆ ನೀಡಬೇಕು. ಉಳಿದ 10 ಸಾವಿರ ರೂ. ಹಣವನ್ನು ಸರ್ಕಾರಕ್ಕೆ ದಂಡವಾಗಿ ಪಾವತಿಸಬೇಕು ಎಂದು ನ್ಯಾಯಾಲಯ ಆದೇಶ ಹೊರಡಿಸಿದೆ.

Join Whatsapp