Home ಕರಾವಳಿ ಕಾಸರಗೋಡು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪಿಗೆ 54 ವರ್ಷ ಜೈಲು ಶಿಕ್ಷೆ ವಿಧಿಸಿದ...

ಕಾಸರಗೋಡು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪಿಗೆ 54 ವರ್ಷ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ

ಕಾಸರಗೋಡು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಆರೋಪಿಗೆ ನ್ಯಾಯಾಲಯವು 54 ವರ್ಷ ಕಠಿಣ ಸಜೆ ಮತ್ತು 40 ಸಾವಿರ ರೂ. ದಂಡ ವಿಧಿಸಿದೆ.

ಕಾಸರಗೋಡು ಫಾಸ್ಟ್ ಟ್ರ್ಯಾಕ್ ವಿಶೇಷ (ಪೋಕ್ಸೊ) ನ್ಯಾಯಾಲಯದ ನ್ಯಾಯಾಧೀಶ ಎ.ವಿ.ಉನ್ನಿಕೃಷ್ಣನ್ ಅವರು ಎಚ್.ಗೋಪಾಲನ್ (59) ಎಂಬಾತನಿಗೆ ಕಠಿಣ ಶಿಕ್ಷೆ ವಿಧಿಸಿದ್ದಾರೆ.
ದಂಡ ಪಾವತಿಸದಿದ್ದಲ್ಲಿ ಎರಡು ವರ್ಷ ಕಠಿಣ ಸಜೆ ಅನುಭವಿಸಬೇಕಾಗುತ್ತದೆ.

ಘಟನೆ ನಡೆದಿದ್ದು 2020ರಲ್ಲಿ ನಡೆದ ಈ ಪ್ರಕರಣದ ತನಿಖೆಯನ್ನು ಆದೂರು ಪೊಲೀಸ್ ಇನ್ಸ್ ಪೆಕ್ಟರ್ ಪ್ರೇಮಸದನ್ ಕೈಗೊಂಡಿದ್ದರು. ಪ್ರಕರಣದ ಚಾರ್ಜ್ ಶೀಟ್ ಅನ್ನು ಇನ್ಸ್ ಪೆಕ್ಟರ್ ವಿ. ಕೆ ವಿಶ್ವಂಭರನ್ ಸಮರ್ಪಿಸಿದ್ದರು. ವಿವಿಧ POCSO ವಿಭಾಗಗಳಲ್ಲಿ ಆರೋಪಿಗೆ ಈ ಶಿಕ್ಷೆ ವಿಧಿಸಲಾಗಿದೆ.

ಪ್ರಾಸಿಕ್ಯೂಷನ್ ಪರವಾಗಿ ವಿಶೇಷ ಸರಕಾರಿ ಅಭಿಯೋಜಕಿ ಎ.ಕೆ.ಪ್ರಿಯಾ ವಾದ ಮಂಡಿಸಿದ್ದರು.

Join Whatsapp
Exit mobile version