ಕೋವಿಡ್-19 ಮೂರನೇ ಅಲೆ ಈಗಾಗಲೇ ಆರಂಭವಾಗಿದೆ | ಹೈದರಾಬಾದ್ ವಿಜ್ಞಾನಿಯೊಬ್ಬರ ಆಘಾತಕಾರಿ ಹೇಳಿಕೆ

Prasthutha: July 13, 2021

ಹೈದರಾಬಾದ್: ಸೆಪ್ಟೆಂಬರ್ ನಲ್ಲಿ ಭಾರತಕ್ಕೆ ಕೋವಿಡ್ ಮೂರನೇ ಅಲೆ ಅಪ್ಪಳಿಸುತ್ತದೆ ಎಂಬ ತಜ್ಞರ ವರದಿಯ ಬೆನ್ನಲ್ಲೇ ಇತ್ತ ಹೈದರಾಬಾದ್ ಮೂಲದ ವಿಜ್ಞಾನಿಯೊಬ್ಬರು ಕಳೆದ ಜುಲೈ 4ರಿಂದಲೇ ಕೋವಿಡ್ ಮೂರನೇ ಅಲೆ ಆರಂಭವಾಗಿದೆ ಎಂಬ ಆಘಾತಕಾರಿ ಮಾಹಿತಿಯನ್ನು ಹೊರ ಹಾಕಿದ್ದಾರೆ.

ಹೈದರಾಬಾದ್ ವಿಶ್ವವಿದ್ಯಾಲಯದ ಉಪಕುಲಪತಿಯಾಗಿ ಸೇವೆ ಸಲ್ಲಿಸಿದ ಹಿರಿಯ ಭೌತವಿಜ್ಞಾನಿ ಡಾ.ವಿಪಿನ್ ಶ್ರೀವಾಸ್ತವ ಅವರು, ಭಾರತದಲ್ಲಿ ಕೋವಿಡ್-19 ಸೋಂಕಿನ ಹರಡುವಿಕೆಯನ್ನು ವಿವರವಾಗಿ ವಿಶ್ಲೇಷಿಸಿದ್ದು, ಜುಲೈ 4 ರಿಂದಲೇ ಮೂರನೇ ಅಲೆ ಪ್ರಾರಂಭವಾಗಿರಬಹುದು ಎಂದು ಹೇಳಿದ್ದಾರೆ.

ಕಳೆದ 463 ದಿನಗಳಲ್ಲಿ ದೇಶದಲ್ಲಿ ಸೋಂಕು ಪ್ರಕರಣಗಳು ಮತ್ತು ಸಾವುಗಳ ಸಂಖ್ಯೆಯನ್ನು ಅಧ್ಯಯನ ಮಾಡಲು ವಿಶೇಷ ವಿಧಾನವನ್ನು ಅಭಿವೃದ್ಧಿಪಡಿಸಿರುವ ಡಾ.ವಿಪಿನ್ ಶ್ರೀವಾಸ್ತವ ಅವರು ಈ ವರದಿಯ ಆಧಾರದ ಮೇರೆಗೆ ಜುಲೈ 4 ರ ದಿನಾಂಕದಿಂದಲೇ ಮೂರನೇ ಅಲೆ ಆರಂಭವಾಗಿದೆ ಎಂದು  ಅಭಿಪ್ರಾಯಪಟ್ಟಿದ್ದಾರೆ. ಈ ಹಿಂದೆ ಈ ವರ್ಷದ ಫೆಬ್ರವರಿ ಮೊದಲ ವಾರದಲ್ಲಿ ಎರಡನೇ ತರಂಗ ಆರಂಭವಾಗಿತ್ತು. ಇದರ ಲೆಕ್ಕಾಚಾರದ ಮೇರೆಗೆ ಜುಲೈ 4ರಿಂದಲೇ ಮೂರನೇ ಅಲೆ ಆರಂಭವಾಗಿರಬಹುದು ಎಂದು ಲೆಕ್ಕಾಚಾರ ಹಾಕಿದ್ದಾರೆ. 

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ