Home ಟಾಪ್ ಸುದ್ದಿಗಳು ಮೃತ ಬಾಲಕಲಾವಿದೆ ಸಮನ್ವಿ ಮನೆಗೆ ಡಿ.ಕೆ. ಶಿವಕುಮಾರ್ ಭೇಟಿ, ಕುಟುಂಬ ಸದಸ್ಯರಿಗೆ ಸಾಂತ್ವನ

ಮೃತ ಬಾಲಕಲಾವಿದೆ ಸಮನ್ವಿ ಮನೆಗೆ ಡಿ.ಕೆ. ಶಿವಕುಮಾರ್ ಭೇಟಿ, ಕುಟುಂಬ ಸದಸ್ಯರಿಗೆ ಸಾಂತ್ವನ

ಬೆಂಗಳೂರು: ಇತ್ತೀಚೆಗೆ ರಸ್ತೆ ಅಪಘಾತದಲ್ಲಿ ಮೃತಪಟ್ಟ ಬಾಲಕಲಾವಿದೆ, ಕಿರುತೆರೆ ನಟಿ ಅಮೃತಾ ಅವರ ಪುತ್ರಿ, ಖ್ಯಾತ ಹರಿಕಥಾ ವಿದ್ವಾಂಸ ಗುರುರಾಜಲುನಾಯ್ಡು ಅವರ ಮರಿ ಮೊಮ್ಮಗಳು ಸಮನ್ವಿಯ ಗುಬ್ಬಲಾಳ ಸಮೀಪದ ಮನೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮಂಗಳವಾರ ಭೇಟಿ ನೀಡಿ, ಆಕೆಯ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.

ಭೇಟಿ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ‘ಸಮನ್ವಿ ಚಿಕ್ಕ ವಯಸ್ಸಿನಲ್ಲೇ ಸಾಂಸ್ಕೃತಿಕ ಕ್ಷೇತ್ರದಿಂದ ಜನರ ಮನಗೆದ್ದು ಅಪಾರ ಅಭಿಮಾನಿಗಳನ್ನು ಸಂಪಾದಿಸಿದ್ದಳು. ಚಿಕ್ಕ ವಯಸ್ಸಿನಲ್ಲಿ ಇಂತಹ ಪ್ರತಿಭೆ ಎಲ್ಲರಿಗೂ ಸಿಗುವುದಿಲ್ಲ. ಆಕೆಗೆ ಇಷ್ಟು ಸಣ್ಣ ವಯಸ್ಸಿನಲ್ಲೇ ಈ ರೀತಿ ಆಗಬಾರದಿತ್ತು. ಯಮ ನಿಷ್ಕರುಣಿ.

ಆಕೆಯ ತಂದೆ ನನಗೆ ತುಂಬಾ ಪರಿಚಯ. ನಾವೆಲ್ಲ ವಿದ್ಯಾರ್ಥಿ ಕಾಲದಿಂದಲೂ ಪರಿಚಿತರು. ಈ ಸಮಯದಲ್ಲಿ ವೈಯಕ್ತಿಕವಾಗಿ ಹಾಗೂ ಪಕ್ಷದ ಅಧ್ಯಕ್ಷನಾಗಿ ಅವರಿಗೆ ಧೈರ್ಯ ತುಂಬುವ ಕೆಲಸ ಮಾಡಿದ್ದೇನೆ. ಚಿಕ್ಕ ವಯಸ್ಸಿನಲ್ಲೇ ಅದ್ಭುತ ಪ್ರತಿಭೆಯೊಂದು ಮಾಯವಾಗಿದೆ. ಆಕೆಯ ತಂದೆ, ತಾಯಿ ಬಹಳ ನೋವಿನಲ್ಲಿದ್ದು, ಧೈರ್ಯ ಕಳೆದುಕೊಳ್ಳಬೇಡಿ ಎಂದು ಹೇಳಿದ್ದೇನೆ. ಇದು ಬಹಳ ದುಃಖಕರ ಸಮಯ. ಅವರಿಗೆ ಈ ದುಃಖ ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ’ ಎಂದರು.

Join Whatsapp
Exit mobile version