Home ಟಾಪ್ ಸುದ್ದಿಗಳು ದುರ್ಗಾ ಮೂರ್ತಿ ವಿಸರ್ಜನೆ ವೇಳೆ ಐವರು ನೀರುಪಾಲು

ದುರ್ಗಾ ಮೂರ್ತಿ ವಿಸರ್ಜನೆ ವೇಳೆ ಐವರು ನೀರುಪಾಲು

ಜೈಪುರ: ದುರ್ಗಾ ಮೂರ್ತಿ ವಿಸರ್ಜನೆಯ ವೇಳೆ ಐದು ಮಂದಿ ನೀರಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಧೋಲ್ ಪುರದಲ್ಲಿ ನಡೆದಿದೆ.

ಮೃತಪಟ್ಟವರೆಲ್ಲರೂ ಉತ್ತರ ಪ್ರದೇಶದ ಆಗ್ರಾ ಜಿಲ್ಲೆಯ ಜಗ್ನೇರ್ ಪೊಲೀಸ್ ಠಾಣಾ ಪ್ರದೇಶದ ನಿವಾಸಿಗಳಾಗಿದ್ದಾರೆ.

ನವರಾತ್ರಿ ಹಿನ್ನೆಲೆಯಲ್ಲಿ ದುರ್ಗಾ ಮೂರ್ತಿಯನ್ನು ವಿಸರ್ಜನೆ ಮಾಡಲು ಐವರು ಆಗ್ರಾದ ಭಾವನಾಪುರ ಗ್ರಾಮದಿಂದ ಧೋಲ್ಪುರಕ್ಕೆ ಬಂದಿದ್ದರು ಎನ್ನಲಾಗಿದೆ. ಶೋಧ ಕಾರ್ಯಾಚರಣೆ ಬಳಿಕ ಆ ಐವರ ಶವಗಳನ್ನು ಹೊರಗೆ ತೆಗೆಯಲಾಗಿದೆ.

Join Whatsapp
Exit mobile version