ಕಲಬುರಗಿ: ವಿಕೃತ ಮನಸ್ಸಿನವರು ಮಾತ್ರ ಪೆಟ್ರೋಲ್ ಬೆಲೆ 100 ರೂ. ಆದರೂ ಪರವಾಗಿಲ್ಲ ಎನ್ನುತ್ತಾರೆ ಎಂದು ಕಾಂಗ್ರೆಸ್ ಹಿರಿಯ ನಾಯಕ, ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದ್ದಾರೆ.
ಈ ಕುರಿತು ಕಲಬುರಗಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮ್ಮ ಕಾಲದಲ್ಲಿ 60 ರೂಪಾಯಿಗೆ ಪೆಟ್ರೋಲ್ ದೊರಕುತಿತ್ತು. ಇದೀಗ ನೂರರ ಗಡಿ ದಾಟಿದರೂ ಕೇಂದ್ರ ಸರ್ಕಾರವನ್ನು ಯಾರು ಕೂಡ ಪ್ರಶ್ನೆ ಮಾಡುತ್ತಿಲ್ಲ. ಕಚ್ಚಾ ತೈಲ ಬೆಲೆ ಕಡಿಮೆ ಇದ್ದರೂ, ದೇಶದಲ್ಲಿ ಪೆಟ್ರೋಲ್ ಡೀಸೆಲ್ ನೂರರ ಗಡಿ ದಾಟಿದೆ. ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಹೀಗಾಗಿ ಜನ ಸಾಮಾನ್ಯರಿಗೆ ಹೊರೆಯಾಗಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.