Home ಟಾಪ್ ಸುದ್ದಿಗಳು ಡಬಲ್ ಎಂಜಿನ್ ಸರಕಾರದ ಡಬಲ್ ಗೇಮ್; ಬಿಜೆಪಿ ವಿರುದ್ಧ ಎಚ್‌.ಡಿ.ಕೆ ವಾಗ್ದಾಳಿ

ಡಬಲ್ ಎಂಜಿನ್ ಸರಕಾರದ ಡಬಲ್ ಗೇಮ್; ಬಿಜೆಪಿ ವಿರುದ್ಧ ಎಚ್‌.ಡಿ.ಕೆ ವಾಗ್ದಾಳಿ

ಬೆಂಗಳೂರು: ಮಂಗಳೂರಿನಲ್ಲಿ ನಡೆದ ಸರಣಿ ಹತ್ಯೆ ಪ್ರಕರಣಗಳನ್ನು ತೀವ್ರವಾಗಿ ಖಂಡಿಸಿರುವ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.


ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಎಚ್‌ಡಿಕೆ, ನಾಡಿನ ಜನರನ್ನಷ್ಟೇ ಅಲ್ಲ, ತನ್ನ ಕಾರ್ಯಕರ್ತರನ್ನೇ ರಕ್ಷಣೆ ಮಾಡಿಕೊಳ್ಳಲಾಗದ ಅಸಮರ್ಥ, ಅಸಹಾಯಕ ಬಿಜೆಪಿ ಸರಕಾರ, ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣವನ್ನು NIA ತನಿಖೆಗೆ ಒಪ್ಪಿಸಿದೆ. ಆದರೆ, ಕರಾವಳಿಯಲ್ಲಿ ನಡೆದ ಎಲ್ಲ ಹತ್ಯೆಗಳನ್ನೂ NIA ತನಿಖೆಗೆ ವಹಿಸಲು ಏಕೆ ಹಿಂಜರಿಯುತ್ತಿದೆ ಎಂದು ಪ್ರಶ್ನಿಸಿದ್ದಾರೆ.


ಪ್ರವೀಣ್ ಹತ್ಯೆ ಪ್ರಕರಣವನ್ನು NIA ತನಿಖೆಗೆ ಒಪ್ಪಿಸಿ ವೀರಾವೇಶ ಮೆರೆದ ಮುಖ್ಯಮಂತ್ರಿ ಬೊಮ್ಮಾಯಿ, ಮಂಗಳೂರಿನಲ್ಲಿ ಜನರಿಗೆ ಕೊಟ್ಟ ಸಂದೇಶವೇನು? ಅವರ ನಾಲಿಗೆಯ ಮೇಲೆ ಒಮ್ಮೆಯಾದರೂ “ಶಾಂತಿ ಕಾಪಾಡಿ” ಎನ್ನುವ ಮಾತು ಬರಲಿಲ್ಲ!! ನೆಮ್ಮದಿಗಾಗಿ ಕಿಂಚಿತ್ ಕ್ರಮ ವಹಿಸಲೂ ಇಲ್ಲ. ಬದಲಾಗಿ ಹಿಂಸೆಗೆ ಇನ್ನಷ್ಟು ತುಪ್ಪ ಸುರಿದು ಬಂದರು.


ಕರಾವಳಿ ಭಾಗದಲ್ಲಿ ಪ್ರತಿ ಕೊಲೆ ಬಗ್ಗೆಯೂ ಸರಕಾರಕ್ಕೆ ಮಾಹಿತಿ ಇದೆ. ಆ ಕೊಲೆಗಳು ಏಕಾಗುತ್ತಿವೆ ಎನ್ನುವುದೂ ಗೊತ್ತಿದೆ. ಆದರೆ, ʼಡಬಲ್ ಎಂಜಿನ್ ಸರಕಾರ ಡಬಲ್ ಗೇಮ್ʼ ಆಡುತ್ತಿದೆ. ಜಗತ್ತಿನ ಅತಿದೊಡ್ಡ ರಾಜಕೀಯ ಪಕ್ಷ ಎಂದು ಬೀಗುವ ಬಿಜೆಪಿ ಪಕ್ಷ, ತನಗೆ ಅಧಿಕಾರ ತಂದುಕೊಟ್ಟ ಯುವಕರ ಜೀವಗಳಿಗೇ ಗ್ಯಾರಂಟಿ ಕೊಡದಷ್ಟು ದುರ್ಬಲವಾಗಿದೆ ಎಂದು ಟೀಕಿಸಿದರು.

Join Whatsapp
Exit mobile version