ಚಾಲಕನಿಗೆ ಹೃದಯಾಘಾತ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಆಟೋ!

Prasthutha|

ಉಡುಪಿ: ಆಟೋ ಚಲಿಸುತ್ತಿದ್ದ ವೇಳೆಯೇ ಚಾಲಕನಿಗೆ ಹೃದಯಾಘಾತ ಸಂಭವಿಸಿದ್ದು, ನಿಯಂತ್ರಣ ತಪ್ಪಿದ ಆಟೋ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದೆ. ರಿಕ್ಷಾದಲ್ಲಿದ್ದ ಮಹಿಳಾ ಪ್ರಯಾಣಿಕರಿಬ್ಬರು ಗಾಯಗೊಂಡಿದ್ದಾರೆ.

- Advertisement -

ಕಾಡುಬೆಟ್ಟುವಿನ ಸುರೇಶ್ ಆಟೋ ಚಾಲನೆಯಲ್ಲಿರುವಾಗಲೇ ಹೃದಯಾಘಾತಕ್ಕೊಳಗಾದ ವ್ಯಕ್ತಿ. ರಿಕ್ಷಾದಲ್ಲಿ ಇಬ್ಬರು ಮಹಿಳಾ ಪ್ರಯಾಣಿಕರನ್ನು ಅಜ್ಜರಕಾಡುನಿಂದ ಉಡುಪಿ ಬಸ್ ನಿಲ್ದಾಣಕ್ಕೆ ಕರೆದೊಯ್ಯುತ್ತಿದ್ದ ವೇಳೆ ಹಠಾತ್ ಹೃದಯಘಾತವಾಗಿ ಕುಸಿದು ಬಿದ್ದಿದ್ದಾರೆ.

ರಿಕ್ಷಾ ವಿರುದ್ಧ ದಿಕ್ಕಿನಲ್ಲಿ ಚಲಿಸಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ. ಮಹಿಳಾ ಪ್ರಯಾಣಿಕರು ಗಾಯಗೊಂಡಿದ್ದು,ಹೆಚ್ಚಿನ ಗಾಯಗಳಿಲ್ಲದೆ ಪಾರಾಗಿದ್ದಾರೆ.ಅದೇ ರಸ್ತೆಯಲ್ಲಿ ಹೋಗುತ್ತಿದ್ದ ಇನ್ನೋರ್ವ ರಿಕ್ಷಾ ಚಾಲಕ ಮತ್ತು ಇತರರು ತತ್ ಕ್ಷಣ ಸುರೇಶ್ ಅವರನ್ನು ಅಜ್ಜರಕಾಡು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

Join Whatsapp