Home Uncategorized ಮಡಿಕೇರಿ: ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ಕೆಳಕ್ಕುರುಳಿದ ಕಾರು

ಮಡಿಕೇರಿ: ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ಕೆಳಕ್ಕುರುಳಿದ ಕಾರು

ಮಡಿಕೇರಿ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಸೇತುವೆಯಿಂದ ಕೆಳಕ್ಕುರುಳಿದ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಕೊಂಡಂಗೇರಿ ಗ್ರಾಮದಲ್ಲಿ ನಡೆದಿದೆ.

ಕಾರು ಸೇತುವೆಯಿಂದ ಕೆಳಕ್ಕೆ ಉರುಳಿದ್ದು ಸ್ವಲ್ಪದರಲ್ಲಿ ಭಾರೀ ಅನಾಹುತ ತಪ್ಪಿದ್ದು,  ನದಿಯಿಂದ ಕೆಲವೇ ಅಡಿ ದೂರದಲ್ಲಿ ನಿಂತಿದೆ. ಒಂದು ಕಾರು ನದಿಗೆ ಬಿದ್ದಿದ್ದಲ್ಲಿ ಭಾರೀ ಅಪಾಯ ಸಂಭವಿಸುವ ಸಾಧ್ಯತೆ ಇತ್ತು.

ಇನ್ನೂ ಅದೃಷ್ಟಾವತ್ ಕಾರಿನಲ್ಲಿ ಇದ್ದ ಪ್ರಯಾಣಿಕರೆಲ್ಲರೂ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಕಾರಿನಲ್ಲಿದ್ದ ಚಾಲಕ ಪವಾಡ ಸದೃಶ ಪಾರಾಗಿದ್ದಾರೆ.  ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಮರ‍್ನಾಡು ಠಾಣಾ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Join Whatsapp
Exit mobile version