ಸುಳ್ಯ | ಚಾಲಕನ ನಿಯಂತ್ರಣ ತಪ್ಪಿ ಬಸ್ ಮರಕ್ಕೆ ಡಿಕ್ಕಿ

Prasthutha|

ಸುಳ್ಯ: ಐರಾವತ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಮರಕ್ಕೆ ಡಿಕ್ಕಿ ಹೊಡೆದ ಘಟನೆ ಸುಳ್ಯದ ಅರಂತೋಡು ಕಾಮದೇನು ಹೋಟೆಲ್ ಬಳಿಯ ತಿರುವಿನಲ್ಲಿ ಸಂಭವಿಸಿದೆ.

- Advertisement -


ಮಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದ ಐರಾವತ ಬಸ್ ಮಂಗಳವಾರ ತಡರಾತ್ರಿ ಅರಂತೋಡು ಬಳಿ ತಿರುವಿನಲ್ಲಿ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ಪರಿಣಾಮ ಮರಕ್ಕೆ ಡಿಕ್ಕಿ ಹೊಡೆದಿದೆ. ಇದೆ ವೇಳೆ ಅಲ್ಲಿದ್ದ ವಿದ್ಯುತ್ ಕಂಬವೊಂದು ತುಂಡಾಗಿ ಬಿದ್ದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎನ್ನಲಾಗಿದೆ.

Join Whatsapp