ಬೆಲೆ ಏರಿಕೆ ವಿರುದ್ಧಹೋರಾಟ; ಕೇಂದ್ರಕ್ಕೆ ರಾಜ್ಯ ಕಾಂಗ್ರೆಸ್ ತಾಕೀತು

Prasthutha|

ಬೆಂಗಳೂರು:ತೈಲ ಬೆಲೆ ಏರಿಕೆ ವಿಚಾರಕ್ಕೆ ಸಂಬಂಧಿಸಿ  ಕೇಂದ್ರ ಸರ್ಕಾರದ ನಡೆಯನ್ನು ತರಾಟೆಗೆ ತೆಗೆದುಕೊಂಡಿರುವ ರಾಜ್ಯ ಕಾಂಗ್ರೆಸ್, ಬೆಲೆ ಏರಿಕೆ ವಿರುದ್ಧ ಮುಂದಿನ ದಿನಗಳಲ್ಲಿ ಹೋರಾಟ ನಡೆಸಲಾಗುತ್ತದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

- Advertisement -

ಪಂಚರಾಜ್ಯ  ಚುನಾವಣೆಯ ಮೊದಲು ನವೆಂಬರ್‌ನಲ್ಲಿ ಕೊನೆಯ ಬಾರಿಗೆ ಬೆಲೆ ಪರಿಷ್ಕರಣೆ ಮಾಡಿ ಕಾರ್ಯಗತಗೊಳಿಸಲಾಗಿತ್ತು. ಚುನಾವಣೆ ಅಂತ್ಯಗೊಂಡ ಕೂಡಲೇ ಪುನಃ ಬೆಲೆ ಏರಿಕೆಯಾಗುತ್ತಿದೆ ಅವರು ಎಂದು ಕಿಡಿಕಾರಿದರು.

ಇದೀಗ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಸುಮಾರು 80 ಪೈಸೆ ಮತ್ತು ಎಲ್‌ಪಿಜಿ ಮೇಲೆ 50 ರೂ.ಗಳಷ್ಟು ಏರಿಕೆ ಮಾಡಲಾಗಿದೆ. ಅಡುಗೆ ಎಣ್ಣೆ, ಕಬ್ಬಿಣ, ಸಿಮೆಂಟ್ ಬೆಲೆ ಈಗಾಗಲೇ ಗಗನಕ್ಕೇರಿದೆ. ಡೀಸೆಲ್ ಬೆಲೆ ಏರಿಕೆಯಾದರೆ, ರಸಗೊಬ್ಬರ, ಆಹಾರ ಪದಾರ್ಥಗಳ ಬೆಲೆಗಳು ಹೀಗೆ ಎಲ್ಲವೂ ಹೆಚ್ಚಾಗುತ್ತದೆ. ಇದರಿಂದ ಸಾಮಾನ್ಯ ಜನರಿಗೆ ಹೊರೆಯಾಗುತ್ತದೆ ಎಂದು ಹೇಳಿದ್ದಾರೆ.

- Advertisement -

ಕೇಂದ್ರ ಸರ್ಕಾರ ಕಾರ್ಪೊರೇಟ್ ಸಂಸ್ಥೆಗಳ ಮೇಲಿನ ತೆರಿಗೆ ಕಡಿಮೆ ಮಾಡಿ, ಸಾಮಾನ್ಯ ಜನರ ಮೇಲೆ ಹೆಚ್ಚು ತೆರಿಗೆ ವಿಧಿಸುತ್ತಿದ್ದು, ಬೆಲೆಯೇರಿಕೆಯಿಂದಾಗಿ ಜನರು ಕಂಗಾಲಾಗಿದ್ದಾರೆ.ಕೇಂದ್ರ ಸರ್ಕಾರ ಕೂಡಲೇ ಬೆಲೆಯೇರಿಕೆಯನ್ನು ನಿಲ್ಲಿಸಬೇಕು ಎಂದು ಅವರು ಒತ್ತಾಯಿಸಿದರು.

Join Whatsapp