ಗುರುತು ಪತ್ತೆಯಾದ ಐವರು ಸಂತ್ರಸ್ತೆಯರು ಎಸ್‌ಐಟಿ ಮುಂದೆ ವಿಚಾರಣೆಗೆ ಹಾಜರು

Prasthutha|

ಹಾಸನ: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದು, ಪ್ರಕರಣದದಲ್ಲಿ ಗುರುತು ಪತ್ತೆಯಾದ ಐವರು ಸಂತ್ರಸ್ತೆಯರು ಎಸ್‌ಐಟಿ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ಎಸ್ ಪಿ ಸೀಮಾ ಲಾಟ್ಕರ್ ಮುಂದೆ ಐವರು ಸಂತ್ರಸ್ತೆಯರು ವಿಚಾರಣೆಗೆ ಹಾಜರಾಗಿದ್ದಾರೆ. ಸಂತ್ರಸ್ತೆಯರ ವಿಚಾರಣೆ ನಡೆಸಿರುವ ಎಸ್ ಪಿ ಹಲವು ಮಾಹಿತಿಗಳನ್ನು ಸಂಗ್ರಹಿಸಿದ್ದಾರೆ ಎಂದು ತಿಳಿದುಬಂದಿದೆ.

- Advertisement -

ಪ್ರಕರಣ ಸಂಬಂಧ ಸಂತ್ರಸ್ತೆಯರ ದೂರು ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ವಿಡಿಯೋ ಕೇಸ್ ಗೆ ಸಂಬಂಧಿಸಿದಂತೆ ಎಸ್ ಐಟಿ ತಂಡ ತನಿಖೆ ತೀವ್ರಗೊಳಿಸಿದೆ.

ವಿಡಿಯೋದಲ್ಲಿ ಕೆಲ ರಾಜಕಾರಣಿಗಳು, ಸರ್ಕಾರಿ ಅಧಿಕಾರಿಗಳು ಇರುವುದು ಪತ್ತೆಯಾಗಿದ್ದು, ಇದು ದೇಶದಲ್ಲೇ ಅತ್ಯಂತ ದೊಡ್ಡ ಹಗರಣವೆಂದು ಹೇಳಲಾಗುತ್ತಿದೆ.

Join Whatsapp