ಮೆಜೆಸ್ಟಿಕ್ ಸಿಟಿ ಸೆಂಟರ್ ಮೇಲೆ ದಾಳಿ ನಡೆಸಿದ ಫ್ಲೈಯಿಂಗ್ ಸ್ಕ್ವಾಡ್; ಲಕ್ಷಾಂತರ ಹಣ ವಶಕ್ಕೆ

Prasthutha|

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆ ಚುನಾವಣಾಧಿಕಾರಿಗಳು ಅಲ್ಲಲ್ಲಿ ದಾಳಿ ನಡೆಸಿ ದಾಖಲೆ ಇಲ್ಲದ ಹಣ, ವಸ್ತುಗಳನ್ನು ವಶಕ್ಕೆ ಪಡೆಯುತ್ತಿದ್ದಾರೆ.
ಇದೀಗ ಬೆಂಗಳೂರಿನ ಮೆಜೆಸ್ಟಿಕ್ನಲ್ಲಿ ದಾಳಿ ನಡೆಸಿದ ಫ್ಲೈಯಿಂಗ್ ಸ್ಕ್ವಾಡ್, ನಗದು ಜಪ್ತಿ ಮಾಡಿದೆ. ಸಿಟಿ ಸೆಂಟರ್ಗೆ ದಾಳಿ ನಡೆಸಿ ಅಂಗಡಿಯೊಂದರಲ್ಲಿ ದಾಖಲೆ ಇಲ್ಲದ ಲಕ್ಷಾಂತರ ಹಣ ಪತ್ತೆಯಾಗಿದೆ. ವಿಚಾರಣೆ ವೇಳೆ ದಾಖಲೆ ಇಲ್ಲದೇ ಇರುವುದು ಕಂಡುಬಂದ ಹಿನ್ನೆಲೆ 5.22 ಲಕ್ಷ ಹಣವನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

- Advertisement -

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವಂತೆಯೇ ರಾಜ್ಯದ ಹಲವೆಡೆ ಮತದಾರರಿಗೆ ಹಂಚಲು ಕೊಂಡೊಯ್ಯಲಾಗುತ್ತಿರುವ ಲಕ್ಷ ಲಕ್ಷ ರೂ. ನಗದು, ಚಿನ್ನಾಭರಣ, ಕುಕ್ಕರ್ ಸೇರಿದಂತೆ ಗೃಹ ಬಳಕೆಯ ಸಾಮಗ್ರಿಗಳನ್ನು ಅಧಿಕಾರಿಗಳು ವಶಪಡಿಸಿಕೊಳ್ಳುತ್ತಿದ್ದಾರೆ.