Home ಟಾಪ್ ಸುದ್ದಿಗಳು ಮೊದಲ ಪಟ್ಟಿ ರಿಲೀಸ್ ಬೆನ್ನಲ್ಲೇ ಕಾಂಗ್ರೆಸ್‌ ತೊರೆದ ಮಾಜಿ ಸಿಎಂ ಪುತ್ರ

ಮೊದಲ ಪಟ್ಟಿ ರಿಲೀಸ್ ಬೆನ್ನಲ್ಲೇ ಕಾಂಗ್ರೆಸ್‌ ತೊರೆದ ಮಾಜಿ ಸಿಎಂ ಪುತ್ರ

ಉತ್ತರಾಖಂಡ: ಚುನಾವಣೆಗೆ ಕಾಂಗ್ರೆಸ್ 39 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ರಿಲೀಸ್​ ಮಾಡಿದ ಇದರ ಬೆನ್ನಲ್ಲೇ ಉತ್ತರಾಖಂಡದ ಮಾಜಿ ಮುಖ್ಯಮಂತ್ರಿ ಭುವನ್ ಚಂದ್ರ ಖಂಡೂರಿ ಅವರ ಪುತ್ರ ಮನೀಶ್ ಖಂಡೂರಿ ಪಕ್ಷ ತೊರೆದಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಮನೀಷ್​, ನಾನು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಪ್ರಾಥಮಿಕ ಸದಸ್ಯತ್ವ ಮತ್ತು ಎಲ್ಲಾ ಸಂಬಂಧಿತ ಸ್ಥಾನಗಳಿಗೆ ರಾಜೀನಾಮೆ ನೀಡುತ್ತಿದ್ದೇನೆ. ಯಾವುದೇ ವೈಯಕ್ತಿಕ ಲಾಭದ ನಿರೀಕ್ಷೆ ಇಲ್ಲದೇ ಈ ನಿರ್ಧಾರ ಕೈಗೊಂಡಿದ್ದೇನೆ ಎಂದು ಬರೆದುಕೊಂಡಿದ್ದಾರೆ.

2019ರಲ್ಲಿ ಕಾಂಗ್ರೆಸ್​ ಸೇರ್ಪಡೆಯಾಗಿದ್ದ ಮನೀಷ್​ ಗರ್ವಾಲ್ (ಪೌರಿ) ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಬಿಜೆಪಿ ಅಭ್ಯರ್ಥಿ ತೀರತ್ ಸಿಂಗ್ ರಾವತ್ ಅವರ ವಿರುದ್ಧ ಸೋಲುಂಡಿದ್ದರು. ಈ ಬಾರಿಯೂ ಈ ಕ್ಷೇತ್ರದ ಆಕಾಂಕ್ಷಿಯಾಗಿದ್ದ ಮನೀಷ್​ ಅವರಿಗೆ ಟಿಕೆಟ್​ ಕೈ ತಪ್ಪುವ ಸಾಧ್ಯತೆ ಹೆಚ್ಚಿದ ಕಾರಣ ಕಾಂಗ್ರೆಸ್​ ತೊರೆದಿದ್ದಾರೆ ಎನ್ನಲಾಗಿದೆ.

Join Whatsapp
Exit mobile version