ಪ್ರೀತಿ ನಿರಾಕರಿಸಿದ ವಿದ್ಯಾರ್ಥಿನಿಯ ಕತ್ತು ಸೀಳಿ ಕೊಲೆ!

Prasthutha|

ಬೆಂಗಳೂರು : ಪ್ರೀತಿಸಲು ನಿರಾಕರಿಸಿದ್ದಕ್ಕೆ ಆಸಿಡ್ ಎರಚಿದ ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ದುರಂತ ಘಟನೆಯ ಬೆನ್ನಿಗೇ, ಪ್ರೀತಿಸಲು ಒಪ್ಪದ ವಿದ್ಯಾರ್ಥಿನಿಯ ಕತ್ತು ಸೀಳಿ ಕೊಲೆ ಮಾಡಿರುವ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಬೆಳಗುಂಬ ಗ್ರಾಮದಲ್ಲಿ ನಡೆದಿದೆ.

- Advertisement -

ಬೆಳಗುಂಬ ಸರ್ಕಾರಿ ಪ್ರೌಢಶಾಲೆಯ ಭೂಮಿಕಾ ಮೃತ ವಿದ್ಯಾರ್ಥಿನಿ.

ವಿದ್ಯಾರ್ಥಿನಿಯನ್ನು ಹತ್ಯೆಗೈದ ಯುವಕ ಶರತ್‌ ಕೊಲೆ ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿದ್ದಾನೆ. ಶಾಲೆ ಮುಗಿಸಿ ಹೋಗುವಾಗ ವಿದ್ಯಾರ್ಥಿನಿಯನ್ನು ಹತ್ಯೆಗೈದ ಶರತ್ ಅರಸೀಕೆರೆ ನಗರದ ಖಾಸಗಿ ಕಾಲೇಜಿನಲ್ಲಿ ಪದವಿ ಓದುತ್ತಿದ್ದ. ಕೊಲೆ ಬಳಿಕ ಬಂಡಿಹಳ್ಳಿ ಬಳಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿದ್ದಾನೆ.

- Advertisement -

ಘಟನಾ ಸ್ಥಳಕ್ಕೆ ಎಸ್‌ಪಿ ಮೊಹಮ್ಮದ್ ಸುಜೀತಾ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಅರಸೀಕೆರೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Join Whatsapp