ಯಾದಗಿರಿ: ಹಿಜಾಬ್ ಸಂಬಂಧಿಸಿದಂತೆ ಹೈಕೋರ್ಟ್ ತೀರ್ಪು ನೀಡಿದ ಬೆನ್ನಲ್ಲೆ ಯಾದಗಿರಿಯ ಸುರಪುರ ತಾಲೂಕಿನ ಕೆಂಬಾವಿ ಪಟ್ಟಣದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ಪರೀಕ್ಷೆ ಬಿಟ್ಟು ಹೊರ ನಡೆದಿದ್ದಾರೆ.
ಹಿಜಬ್ ತೆಗೆಯದೆ ಬೆಳಗ್ಗೆಯಿಂದ ಕೋರ್ಟ್ ಆದೇಶಕ್ಕೆ ಕಾದು ಕುಳಿತಿದ್ದ ವಿದ್ಯಾರ್ಥಿನಿಯರು ತೀರ್ಪು ಪ್ರಕಟವಾಗುತ್ತಿದ್ದಂತೆಯೇ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರು ಪೂರ್ವಭಾವಿ ಪರಿಕ್ಷೆ ಬಿಟ್ಟು ಹೊರಕ್ಕೆ ನಡೆದಿದ್ದಾರೆ. ಹಿಜಬ್ ಬಿಟ್ಟು ತರಗತಿಗೆ ಬರಲ್ಲ ಎಂದು ಪರೀಕ್ಷೆ ಬಿಟ್ಟು 8 ವಿದ್ಯಾರ್ಥಿಗಳು ಮನೆಗೆ ಹೋಗಿದ್ದಾರೆ.
ಜ್ಯೂನಿಯರ್ ಪಿಯು ಕಾಲೇಜು ವಿದ್ಯಾರ್ಥಿನಿ ಅಸ್ರಾ ಸುದ್ದಿಗಾರರೊಂದಿಗೆ ಮಾತನಾಡಿ, ಹೈಕೋರ್ಟ್ ಆದೇಶ ಬಂದರೂ ನಾವು ಹಿಜಾಬ್ ಧರಿಸುತ್ತೇವೆ. ನಮಗೆ ಶಿಕ್ಷಣ ಹಾಗೂ ಹಿಜಾಬ್ ಕೂಡ ಮುಖ್ಯವಾಗಿದೆ. ನಾವು ಹಿಜಾಬ್ ತೆಗೆಯಲ್ಲ. ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಬೇಕೆಂದು ಆಗ್ರಹಿಸಿದ್ದಾರೆ.