Home ಟಾಪ್ ಸುದ್ದಿಗಳು ಆಝಾನ್ ವಿಚಾರದಲ್ಲಿ ಸರ್ಕಾರ ಯಾವುದೇ ಹೊಸ ಕಾನೂನು ತಂದಿಲ್ಲ: ಸಿಎಂ ಬೊಮ್ಮಾಯಿ

ಆಝಾನ್ ವಿಚಾರದಲ್ಲಿ ಸರ್ಕಾರ ಯಾವುದೇ ಹೊಸ ಕಾನೂನು ತಂದಿಲ್ಲ: ಸಿಎಂ ಬೊಮ್ಮಾಯಿ

ಬೆಂಗಳೂರು: ಆಝಾನ್ ವಿಚಾರದಲ್ಲಿ ಸರ್ಕಾರ ಹೊಸ ಕಾನೂನು ತಂದಿಲ್ಲ, ಈ ವಿಚಾರದಲ್ಲಿ ಅನಗತ್ಯ ಗೊಂದಲ ಸೃಷ್ಟಿಸುವುದು ಬೇಡ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಸಂಘಟನೆಯಾಗಲಿ ಕಾನೂನನ್ನು ಕೈಗೆತ್ತಿಕೊಳ್ಳದೆ ಶಾಂತಿ-ಸುವ್ಯವಸ್ಥೆ ಕೈಗೊಳ್ಳಲು ಕ್ರಮ ತೆಗೆದುಕೊಳ್ಳುತ್ತೇವೆ, ಸರ್ಕಾರದ ದೃಷ್ಟಿಯಲ್ಲಿ ಎಲ್ಲಾ ಜಾತಿ-ಧರ್ಮದವರು ಒಂದೇ ಎಂದು ಹೇಳಿದ್ದಾರೆ.

ಈಗ ಹಿಂದೂ-ಮುಸ್ಲಿಂ ಧಾರ್ಮಿಕ ವಿಚಾರಗಳ ಬಗ್ಗೆ ನಡೆಯುತ್ತಿರುವ ವಿವಾದಗಳ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ಇವೆಲ್ಲಾ ಹೊಸ ವಿಚಾರಗಳೇನು ಅಲ್ಲ, ಹಲವಾರು ವರ್ಷಗಳಿಂದ ಇವೆ. ಕೆಲವು ಆದೇಶಗಳು 2001, 2002, ಹೈಕೋರ್ಟ್ ತೀರ್ಪು ಆಧಾರದ ಮೇಲೆ ಮಾಡಿದ್ದೇವೆ. ನಾವು ಇಂದಿನ ಬಿಜೆಪಿ ಸರ್ಕಾರ ಹೊಸ ಆದೇಶವನ್ನು ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.

Join Whatsapp
Exit mobile version