ದತ್ತಪೀಠವನ್ನು ಹಿಂದೂಗಳ ಪೀಠವೆಂದು ಆದೇಶಿಸದಿದ್ದರೆ ಸರ್ಕಾರ ಅಲುಗಾಡಲಿದೆ; ಶ್ರೀರಾಮಸೇನೆ ಮುಖಂಡ ಗಂಗಾಧರ್ ಕುಲಕರ್ಣಿ ಎಚ್ಚರಿಕೆ

Prasthutha|

ಚಿಕ್ಕಮಗಳೂರು: ನವೆಂಬರ್ 13ನೇ ತಾರೀಕಿನೊಳಗೆ ದತ್ತಪೀಠವನ್ನು ಹಿಂದೂಗಳ ಪೀಠವೆಂದು ಆದೇಶಿಸಿ, ಹಿಂದೂ ಅರ್ಚಕರನ್ನು ನೇಮಿಸದಿದ್ದರೆ ಪರಿಸ್ಥಿತಿ ಕಠಿಣವಾಗುತ್ತೆ. ಹೇಗೆ ಬಿಜೆಪಿ ಅಧ್ಯಕ್ಷರ ಕಾರು ಅಲುಗಾಡಿತ್ತೋ, ಅದೇ ರೀತಿ ಸರ್ಕಾರ ಅಲುಗಾಡುತ್ತೆ ಎಂದು ಶ್ರೀರಾಮಸೇನೆ ರಾಜ್ಯ ಕಾರ್ಯಾಧ್ಯಕ್ಷ ಗಂಗಾಧರ್ ಕುಲಕರ್ಣಿ ಎಚ್ಚರಿಕೆ ನೀಡಿದ್ದಾರೆ.

- Advertisement -

ಸುದ್ದಿಗಾರರೊಂದಿಗೆ ಮಾತನಾಡಿದ ಕುಲಕರ್ಣಿ, ದತ್ತಪೀಠವನ್ನು ಹಿಂದೂಗಳಿಗೆ ಒಪ್ಪಿಸದಿದ್ದರೆ ಯಡಿಯೂರಪ್ಪ ಅವರ ಪೀಠ ಹೋಗುತ್ತೆ ಎಂದು ಹೇಳಿದ್ದೆ. ದತ್ತ ಗುರುಗಳ ಶಾಪದಿಂದ ಯಡಿಯೂರಪ್ಪ ಪೀಠ ಕಳೆದುಕೊಂಡಿದ್ದಾರೆ. ಈಗ ಬೊಮ್ಮಾಯಿಗೂ ಹೇಳ್ತಿದ್ದೀವೆ. ಮುಂದೆ ಸರ್ಕಾರ ಬರಬೇಕಂದ್ರೆ ತಕ್ಷಣ ದತ್ತಪೀಠವನ್ನ ಹಿಂದುಗಳಿಗೆ ಒಪ್ಪಿಸಿ ಇಲ್ಲವಾದರೆ, ಯಡಿಯೂರಪ್ಪನವರಿಗೆ ಆದ ಪರಿಸ್ಥಿತಿಯೇ ನಿಮಗೂ ಆಗುತ್ತೆ ಎಂದು ಹೇಳಿದರು.

ನಮಗೆ ಈ‌ ಬಿಜೆಪಿ ಸರ್ಕಾರದ ಮೇಲೆ ಹೇಸಿಗೆ ಬರುತ್ತಿದೆ. ಪ್ರತಿ ವರ್ಷ ಬರೋದು, ಹೆಣ ಇಲ್ಲದ ಗೋರಿ ನೋಡೋದು ವಾಪಸ್ ಹೋಗೋದು. ಎಚ್ಚರಿಕೆ ನೀಡಿ, ಆಕ್ರೋಶ ವ್ಯಕ್ತಪಡಿಸಿ ಬೇಜಾರಾಗಿದೆ. ಧರ್ಮದ ವಿಚಾರದಲ್ಲಿ ಡ್ರಾಮಾ ಒಳ್ಳೆಯದಲ್ಲ, ತಕ್ಷಣ ಏನಾದ್ರು ಆಗಲಿ ಎಂದು ಗಟ್ಟಿ ನಿರ್ಧಾರ ಮಾಡಿ ಎಂದು ಒತ್ತಾಯಿಸಿದ್ದಾರೆ.

Join Whatsapp