ಬೆಂಗಳೂರು: ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಎಡಬಿಡಂಗಿ ಸರ್ಕಾರ. ಮನಸ್ಸಿಗೆ ಬಂದಂತೆ ಐದು ಗ್ಯಾರಂಟಿ ಘೋಷಿಸಿ ಅದನ್ನು ಪೂರ್ಣ ಪ್ರಮಾಣದಲ್ಲಿ ಜಾರಿ ಮಾಡಿಲ್ಲ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ.
ಕಾಂಗ್ರೆಸ್ ಸರ್ಕಾರ ಬೇಜವಾಬ್ದಾರಿಯಿಂದ ಕೆಆರ್ ಎಸ್ ನೀರನ್ನು ತಮಿಳುನಾಡಿಗೆ ಬಿಟ್ಟು ಕೊಟ್ಟಿದೆ. ಈ ಕಾರಣದಿಂದ ಇವತ್ತು ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ಕಾಣಿಸಿದೆ ಎಂದು ಆರೋಪಿಸಿದರು.
ನಾವು ಕೋವಿಡ್ ಸಂದರ್ಭದಲ್ಲಿ ಸಭೆ ಮಾಡಿ ಸಮರ್ಥವಾಗಿ ನಿಭಾಯಿಸಿದ್ದೇವೆ. ಆದರೆ ಕಾಂಗ್ರೆಸ್ ಸರ್ಕಾರ ಬೆಂಗಳೂರಿನ ವಾರ್ಡ್ ಮಟ್ಟದಲ್ಲಿ ಒಂದು ಸಭೆಯನ್ನೂ ಮಾಡಿಲ್ಲ. ಕೇಂದ್ರ ಸರ್ಕಾರದ ಮೇಲೆ ಹೇಳುತ್ತೀರಲ್ಲಾ ನಿಮಗೆ ನಾಚಿಕೆ ಆಗಲ್ವಾ ಎಂದು ಪ್ರಶ್ನಿಸಿದ್ದಾರೆ.