ಪಕ್ಷಕ್ಕೆ ‘ಹಾರ್ದಿಕ’ವಾಗಿ ಕೈ ಕೊಟ್ಟ ಪಟೇಲ್

Prasthutha|

ಅಹ್ಮದಾಬಾದ್: ನಿರೀಕ್ಷೆಯಂತೆ ಕಾಂಗ್ರೆಸ್ ನ ಯುವ ನಾಯಕ, ಪಾಟೀದಾರ್ ಸಮುದಾಯದ ಮುಖಂಡ ಹಾರ್ದಿಕ್ ಪಟೇಲ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

- Advertisement -

“ಇಂದು ನಾನು ಕಾಂಗ್ರೆಸ್ ಪಕ್ಷದ ಹುದ್ದೆಗೆ ಮತ್ತು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ನನ್ನ ನಿರ್ಧಾರವನ್ನು ನನ್ನ ಎಲ್ಲಾ ಸಹೋದ್ಯೋಗಿಗಳು ಮತ್ತು ಗುಜರಾತ್ ಜನರು ಸ್ವಾಗತಿಸುತ್ತಾರೆ ಎಂದು ನನಗೆ ಭರವಸೆ ಇದೆ. ನನ್ನ ಈ ನಿರ್ಧಾರದ ನಂತರ, ನಾನು ಭವಿಷ್ಯದಲ್ಲಿ ಗುಜರಾತ್ ಗಾಗಿ ನಿಜವಾಗಿಯೂ ಸಕಾರಾತ್ಮಕವಾಗಿ ಕೆಲಸ ಮಾಡಲು ಸಾಧ್ಯವಾಗುತ್ತದೆ ಎಂದು ನಾನು ನಂಬುತ್ತೇನೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಪಟೇಲ್ ಬಿಜೆಪಿ ಸೇರಲಿದ್ದಾರೆ ಎಂಬ ಮಾತುಗಳು ಗುಜರಾತ್ ನಲ್ಲಿ ಕೇಳಿಬರುತ್ತಿದೆ.

Join Whatsapp