ಹಿಜಾಬ್ ಗೂ ಸ್ವಾಮೀಜಿಗಳ ಬಟ್ಟೆಗೂ ಹೋಲಿಕೆ ಮಾಡಿಲ್ಲ: ಸಿದ್ದರಾಮಯ್ಯ

Prasthutha|

ಮೈಸೂರು: ಸ್ವಾಮೀಜಿಯವರ ಬಗ್ಗೆ ನನಗೆ ವೈಯಕ್ತಿಕವಾಗಿ ಅಪಾರ ಗೌರವವಿದೆ. ಅವರಿಗೆ ಅಗೌರವ ತೋರುವಂತೆ ಈ ಹಿಂದೆಯೂ ಮಾತನಾಡಿಲ್ಲ, ಮುಂದೆಯೂ ಮಾತನಾಡಲ್ಲ. ಹಿಜಾಬ್ ಬಗ್ಗೆ ನಿನ್ನೆ ನಾನು ಪ್ರಸ್ತಾಪವನ್ನೇ ಮಾಡಿಲ್ಲ. ಹೀಗಿದ್ದಾಗ ಹಿಜಾಬ್ ಗೂ ಮತ್ತು ಸ್ವಾಮೀಜಿಗಳ ಬಟ್ಟೆಗೂ ಹೋಲಿಕೆ ಮಾಡಲಾಗಿದೆ ಎಂಬಂಶ ಎಲ್ಲಿಂದ ಬರುತ್ತೆ? ಹೆಣ್ಣು ಮಕ್ಕಳು ಧರಿಸುವ ದುಪ್ಪಟ್ಟಾ ಬಗ್ಗೆ ಮಾತನಾಡಿದ್ದೆ, ಹಿಜಾಬ್ ಗೂ ದುಪ್ಪಟ್ಟಾಗೂ ಭಾರಿ ವ್ಯತ್ಯಾಸವಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

- Advertisement -

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಸದನದಲ್ಲಿ ಮಾತನಾಡುವಾಗ ತರಗತಿ ಒಳಗೆ ಹಿಜಾಬ್ ಧರಿಸದಂತೆ ನ್ಯಾಯಾಲಯದ ಆದೇಶ ಇದೆ, ಹಾಗಾಗಿ ಸರ್ಕಾರ ಶಾಲಾ ಸಮವಸ್ತ್ರದ ಬಣ್ಣದ ದುಪ್ಪಟ್ಟಾ ಧರಿಸಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಿ ಎಂದು ಸಚಿವರಾದ ಅಶ್ವತ್ಥ ನಾರಾಯಣ ಮತ್ತು ನಾಗೇಶ್ ಅವರಿಗೆ ಸಲಹೆ ನೀಡಿದ್ದೆ. ಇದನ್ನು ಸ್ವೀಕರಿಸೋದು ಬಿಡೋದು ಸರ್ಕಾರಕ್ಕೆ ಬಿಟ್ಟ ವಿಚಾರ. ವಿದ್ಯಾರ್ಥಿಗಳ ಭವಿಷ್ಯ ಹಾಳಾಗಬಾರದು ಎಂಬ ಕಾರಣಕ್ಕೆ ನನ್ನ ಕರ್ತವ್ಯವನ್ನು ನಾನು ಮಾಡಿದ್ದೇನೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು, ನಾವು ಸಮವಸ್ತ್ರಕ್ಕೆ ವಿರುದ್ಧವಾಗಿಲ್ಲ, ಸಮವಸ್ತ್ರವನ್ನು ಧರಿಸಲಿ, ಅದರ ಜೊತೆಗೆ ಸಮವಸ್ತ್ರದ ಬಣ್ಣದ ದುಪ್ಪಟ್ಟವನ್ನು ಧರಿಸಲು ಅವಕಾಶ ನೀಡಬೇಕು ಎಂದು ಹೇಳಿದ್ದೆ. ಮಕ್ಕಳಿಗೆ ಶಿಕ್ಷಣ ನೀಡಬೇಕಿರುವುದು ಸರ್ಕಾರದ ಜವಾಬ್ದಾರಿ, ಒಂದು ವೇಳೆ ಪರೀಕ್ಷೆಗೆ ಹಾಜರಾಗದೆ ವಿದ್ಯಾರ್ಥಿಗಳ ಭವಿಷ್ಯ ಹಾಳಾದರೆ ಅದಕ್ಕೂ ಸರ್ಕಾರವೇ ಜವಾಬ್ದಾರಿಯಾಗುತ್ತದೆ. ಸಲಹೆ ನೀಡುವುದು ವಿರೋಧ ಪಕ್ಷವಾದ ನಮ್ಮ ಕರ್ತವ್ಯ. ಅದನ್ನು ಸ್ವೀಕರಿಸದಿದ್ದರೆ ನಾವೇನು ಮಾಡೋದು? ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

Join Whatsapp