Home ಟಾಪ್ ಸುದ್ದಿಗಳು ಹಿಂದೂ ಪದ ವಿವಾದ; ಕ್ಷಮೆ ಕೇಳುವುದಿಲ್ಲ, ತಪ್ಪೆಂದು ಸಾಬೀತಾದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧ:...

ಹಿಂದೂ ಪದ ವಿವಾದ; ಕ್ಷಮೆ ಕೇಳುವುದಿಲ್ಲ, ತಪ್ಪೆಂದು ಸಾಬೀತಾದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧ: ಸತೀಶ್ ಜಾರಕಿಹೊಳಿ

ಬೆಳಗಾವಿ: ಹಿಂದೂ ಪದದ ಬಗ್ಗೆ ನೀಡಿದ್ದ ಹೇಳಿಕೆ ಕುರಿತು ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ, ತಪ್ಪೆಂದು ಸಾಬೀತಾದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಅರೆಬರೆ ಓದಿದವನಲ್ಲ, 30 ವರ್ಷಗಳಿಂದ ಓದುತ್ತಲೇ ಇದ್ದೇನೆ. ಆಳವಾದ ಅಧ್ಯಯನದ ಅನುಭವದಿಂದಲೇ ನಾನು ಈ ಹೇಳಿಕೆ ನೀಡಿದ್ದೇನೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ತಿರುಗೇಟು ನೀಡಿದರು.

‘ಹಿಂದೂ ಎಂಬುದು ಪರ್ಷಿಯನ್ ಭಾಷೆಯಿಂದ ಬಂದ ಶಬ್ದ. ಹಿಂದೂ ಪದದ ಬಗ್ಗೆ ಶಬ್ದಕೋಶದಲ್ಲಿ, ವಿಕಿಪಿಡಿಯಾದಲ್ಲಿ ಇರುವ ವಿವರಣೆಯನ್ನು ನಾನು ಹೇಳಿದ್ದೇನೆ. ಹಿಂದೂ ಪದದ ಬಗ್ಗೆ ಚರ್ಚೆಯಾಗಬೇಕು ಎಂದು ನಾನು ಹೇಳಿದ್ದೇನೆ. ಆದರೆ, ನಾನು ಏನು ಹೇಳಿದ್ದೇನೆಯೋ ಅದರ ಬಗ್ಗೆ ಅಥವಾ ಹಿಂದೂ ಪದದ ನಿಜವಾದ ಅರ್ಥದ ಬಗ್ಗೆ ಚರ್ಚೆ ನಡೆಯುತ್ತಿಲ್ಲ. ಬೇರೆ ಯಾವುದೋ ವಿಷಯಗಳ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ನಾನು ತಪ್ಪು ಹೇಳಿದ್ದೇನೆಂದು ಸಾಬೀತುಪಡಿಸಿದರೆ ಕ್ಷಮೆಯಾಚಿಸುವುದಷ್ಟೇ ಅಲ್ಲ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತೇನೆ ಎಂದರು.

Join Whatsapp
Exit mobile version