Home ಟಾಪ್ ಸುದ್ದಿಗಳು ಮುಂದಿನ ಮುಖ್ಯಮಂತ್ರಿ ವಿಷಯದ ಬಗ್ಗೆ ಈಗ ಚರ್ಚೆ ಅಪ್ರಸ್ತುತ: ಸಿದ್ದರಾಮಯ್ಯ

ಮುಂದಿನ ಮುಖ್ಯಮಂತ್ರಿ ವಿಷಯದ ಬಗ್ಗೆ ಈಗ ಚರ್ಚೆ ಅಪ್ರಸ್ತುತ: ಸಿದ್ದರಾಮಯ್ಯ

ಎಐಸಿಸಿ ಕಾರ್ಯದರ್ಶಿ ಮಧು ಯಾಕ್ಷಿಗೌಡ ಅವರು ದೆಹಲಿಯಲ್ಲಿ ಇಂದು ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ದೆಹಲಿ: ರಾಜ್ಯ ಕಾಂಗ್ರೆಸ್ ನಲ್ಲಿ ಯಾವುದೇ ಬಿರುಕು, ಭಿನ್ನಾಭಿಪ್ರಾಯ ಇಲ್ಲ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಪಕ್ಷದಲ್ಲಿ ಒಡಕು ಇದೆ ಎಂಬ ಮಾತುಗಳು ಸತ್ಯಕ್ಕೆ ದೂರ ಎಂದರು.


ನಾವೀಗ ಪ್ರತಿಪಕ್ಷದಲ್ಲಿ ಇದ್ದೇವೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಪಕ್ಷ ಅಧಿಕಾರಕ್ಕೆ ಬರಲಿದೆ. ಹೀಗಿರುವಾಗ ಒಡಕಿನ ಮಾತೇಕೆ ಬರುತ್ತದೆ ಎಂದು ಪ್ರಶ್ನಿಸಿದರು.
ರಾಜ್ಯ ಕಾಂಗ್ರೆಸ್ ಪ್ರಸ್ತುತ ಬಿಜೆಪಿಯ ದುರಾಡಳಿತ, ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಸುತ್ತಿದೆ. ಸರ್ಕಾರದ ಬಗ್ಗೆ ಜನ ಬೇಸತ್ತಿದ್ದಾರೆ. ಈ ಸರ್ಕಾರವನ್ನು ಕಿತ್ತೊಗೆಯಲು ಎಲ್ಲರೂ ಸೇರಿ ಹೋರಾಟ ಮಾಡುತ್ತಿದ್ದೇವೆ ಎಂದರು.
ಮುಂದಿನ ಮುಖ್ಯಮಂತ್ರಿ ವಿಷಯದ ಬಗ್ಗೆ ಚರ್ಚೆ ಅಪ್ರಸ್ತುತ. ಚುನಾವಣೆ ಬಳಿಕ‌ ಶಾಸಕರ ಅಭಿಪ್ರಾಯ ಪಡೆದು ಮುಖ್ಯಮಂತ್ರಿ ಯಾರಾಗಬೇಕು ಎಂಬುದನ್ನು ಹೈಕಮಾಂಡ್ ತೀರ್ಮಾನಿಸುತ್ತದೆ. ವರಿಷ್ಠರ ತೀರ್ಮಾನವೇ ಅಂತಿಮ. ಅವರ ನಿರ್ಧಾರಕ್ಕೆ ಎಲ್ಲರೂ ಬದ್ಧ ಎಂದರು.


ಇಂದು ಸಂಜೆ ಪಕ್ಷದ ವರಿಷ್ಠರಾದ ರಾಹುಲ್ ಗಾಂಧಿಯವರನ್ನು ಭೇಟಿಯಾಗಲಿದ್ದೇನೆ ಎಂದು ಸಿದ್ದರಾಮಯ್ಯ ತಿಳಿಸಿದರು.

Join Whatsapp
Exit mobile version