ಕರ್ನಾಟಕ ಧನವಿನಿಯೋಗ ವಿಧೇಯಕ-2022ಕ್ಕೆ ವಿಧಾನ ಪರಿಷತ್ತನಲ್ಲೂ ಅಂಗೀಕಾರ

Prasthutha|


ಬೆಳಗಾವಿ: ವಿಧಾನಸಭೆಯಲ್ಲಿ ಅಂಗೀಕಾರಗೊಂಡ ಕರ್ನಾಟಕ ಧನವಿನಿಯೋಗ ವಿಧೇಯಕ-2022ಗೆ ವಿಧಾನ ಪರಿಷತ್ತಿನಲ್ಲಿಯು ಸಹ ಅಂಗೀಕಾರ ಸಿಕ್ಕಿತು.

- Advertisement -


ಈ ವೇಳೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, 2022-23ನೇ ಸಾಲಿನ ಪೂರಕ ಅಂದಾಜುಗಳ ಎರಡನೇ ಕಂತಿನ 8001.13 ಕೋಟಿ ರೂ.ಗಳ ಬೇಡಿಕೆಗಳ ಪ್ರಸ್ತಾವನೆಗೆ ವಿಧಾನಸಭೆಯಲ್ಲಿ ಅನುಮೋದನೆ ದೊರೆತಿದ್ದು, ಪರಿಷತ್ ಕೂಡ ಅನುಮೋದನೆ ನೀಡಬೇಕು ಎಂದು ಕೋರಿದರು.


ಇದರಿಂದಾಗಿ ರಾಜ್ಯದ ಪ್ರಗತಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಎಚ್ಚರಿಕೆ ವಹಿಸಲಾಗಿದೆ. ಯಾವುದೇ ಜನಪ್ರಿಯ ಯೋಜನೆಗಳಿಗೆ ಅನುದಾನ ಮೀಸಲಿರಿಸದೇ ಅಗತ್ಯ ಯೋಜನೆಗಳಿಗೆ ಮಾತ್ರ ಅನುದಾನ ರೂಪಿಸಿದ್ದೇವೆ. ಇದು ಪ್ರಸಕ್ತ ಸಾಲಿನ ಆಯವ್ಯಯ ಗಾತ್ರದ ಶೇ.8.38 ರಷ್ಟಿದೆ ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು. ಬಳಿಕ ಸಭಾಪತಿಗಳು ವಿಧೇಯಕ ಸರ್ವಾನುಮತದಿಂದ ಅಂಗೀಕಾರವಾಗಿದೆ ಎಂದು ಪ್ರಕಟಿಸಿದರು.

- Advertisement -


ಧನವಿನಿಯೋಗ ವಿಧೇಯಕ-2022 ಬಗ್ಗೆ ಪರ್ಯಾಲೋಚಿಸುವ ಚರ್ಚೆಯಲ್ಲಿ ಪರಿಷತ್ತಿನ ವಿರೋಧಪಕ್ಷದ ನಾಯಕರಾದ ಬಿ.ಕೆ.ಹರಿಪ್ರಸಾದ್, ವಿರೋಧಪಕ್ಷದ ಮುಖ್ಯ ಸಚೇತಕರಾದ ಪ್ರಕಾಶ ಕೆ. ರಾಥೋಡ್, ಸದಸ್ಯರಾದ ಮರಿತಿಬ್ಬೇಗೌಡ, ತಿಪ್ಪೇಸ್ವಾಮಿ ಹಾಗೂ ಇತರರು ಮಾತನಾಡಿದರು.



Join Whatsapp