ಹೊಸದಿಲ್ಲಿ: ವಿವಾದಿತ ಸಿನಿಮಾ ‘ದಿ ಕೇರಳ ಸ್ಟೋರಿ’ ಪ್ರದರ್ಶನವನ್ನು ಪಶ್ಚಿಮಬಂಗಾಳದಲ್ಲಿ ನಿಷೇಧಿಸಿರುವ ರಾಜ್ಯಸರ್ಕಾರದ ನಿರ್ಣಯ ಪ್ರಶ್ನಿಸಿ, ಸಿನಿಮಾದ ನಿರ್ಮಾಪಕರು ಸಲ್ಲಿಸಿರುವ ಅರ್ಜಿಯನ್ನು ಮೇ 12ರಂದು ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ಸಮ್ಮತಿಸಿದೆ.
ನಿಷೇಧದಿಂದಾಗಿ ತಂಡಕ್ಕೆ ಅಪಾರ ಹಣಕಾಸು ನಷ್ಟವಾಗುತ್ತಿರುವ ಹಿನ್ನೆಲೆ ಅರ್ಜಿಯನ್ನು ತುರ್ತು ವಿಚಾರಣೆಗೆ ಪರಿಗಣಿಸುವಂತೆ ಹಿರಿಯ ವಕೀಲ ಹರೀಶ್ ಸಾಳ್ವೆ ಮನವಿ ಮಾಡಿದ್ದರು.
ಈ ಹಿನ್ನೆಲೆ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ನ್ಯಾಯಪೀಠ, ಶುಕ್ರವಾರ ಅರ್ಜಿಯನ್ನು ವಿಚಾರಣೆಗೆ ಪರಿಗಣಿಸುವುದಾಗಿ ತಿಳಿಸಿದೆ. ಅರ್ಜಿಯಲ್ಲಿ ಬಂಗಾಳ ಸರ್ಕಾರದ ನಿಷೇಧ ಪ್ರಶ್ನಿಸಿರುವುದಲ್ಲದೇ, ತಮಿಳುನಾಡಿನಲ್ಲಿ ಸಿನಿಮಾ ಪ್ರದರ್ಶನಕ್ಕೆ ಎದುರಾಗಿರುವ ಅಡಚಣೆ ಬಗ್ಗೆಯೂ ಪ್ರಸ್ತಾಪಿಸಲಾಗಿದೆ