Home ಟಾಪ್ ಸುದ್ದಿಗಳು ಧರ್ಮ ರಕ್ಷಣೆಯ ಹೆಸರಲ್ಲಿ ಬಿಜೆಪಿ ಬೆಳೆಸಿದ ಗೂಂಡಾ ಸಂಸ್ಕೃತಿಗೆ ಸಾತನೂರಿನಲ್ಲಿ ನಡೆದ ಯುವಕನ ಹತ್ಯೆ ಸಾಕ್ಷಿ:...

ಧರ್ಮ ರಕ್ಷಣೆಯ ಹೆಸರಲ್ಲಿ ಬಿಜೆಪಿ ಬೆಳೆಸಿದ ಗೂಂಡಾ ಸಂಸ್ಕೃತಿಗೆ ಸಾತನೂರಿನಲ್ಲಿ ನಡೆದ ಯುವಕನ ಹತ್ಯೆ ಸಾಕ್ಷಿ: ಸಿದ್ದರಾಮಯ್ಯ

ಬೆಂಗಳೂರು: ಧರ್ಮ ರಕ್ಷಣೆಯ ಹೆಸರಲ್ಲಿ ಬಿಜೆಪಿ ಬೆಳೆಸಿದ ಗೂಂಡಾ ಸಂಸ್ಕೃತಿಗೆ ಸಾತನೂರಿನಲ್ಲಿ ನಡೆದ ಯುವಕನ ಹತ್ಯೆ ಸಾಕ್ಷಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗೋ‌ ಸಾಗಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿ ಮುಸ್ಲಿಮ್‌ ಯುವಕ ಇದ್ರೀಸ್ ಪಾಷಾನನ್ನು ಬರ್ಬರವಾಗಿ ಹತ್ಯೆ ಮಾಡಿದ ಪ್ರಕರಣಕ್ಕೆ ಟ್ವೀಟ್ ಮಾಡಿರುವ ಅವರು, ಈ ಹತ್ಯೆಯ ಹೊಣೆಯನ್ನು ಆರಗ ಜ್ಞಾನೇಂದ್ರ ಅವರಂತಹ ಅಸಮರ್ಥ ಗೃಹ ಸಚಿವರೇ ಹೊರಬೇಕು. ಕರ್ನಾಟಕ ಇಂತಹ ಅಸಮರ್ಥ‌, ಅದಕ್ಷ ಮತ್ತು ಬೇಜವಾಬ್ದಾರಿ ಗೃಹ‌ಸಚಿವರನ್ನು ಎಂದೂ‌ ನೋಡಿರಲಿಲ್ಲ. ತನ್ನ‌ ಇಲಾಖೆಯ ಮೇಲೆ ನಿಯಂತ್ರಣ‌ ಇಲ್ಲದ ಈ ಸಚಿವರಿಗೆ ರಾಜ್ಯದ ಶಾಂತಿ‌ ಮತ್ತು‌ ಸುವ್ಯವಸ್ಥೆಯನ್ನು‌ ನಿರ್ವಹಿಸಲು‌ ಸಾಧ್ಯವೇ? ಮೊದಲು ಇವರನ್ನು ಸಂಪುಟದಿಂದ ಕಿತ್ತು ಹಾಕಿ ಎಂದರು.

ಗೋರಕ್ಷಣೆಯ ಹೆಸರಲ್ಲಿ ನಡೆದ ಹತ್ಯೆ ಕೇವಲ ಹುಚ್ಚಾಟ ಆಗಿರಲಾರದು. ಇದು ಚುನಾವಣಾ ದಿನಗಳಲ್ಲಿ ಕೋಮುದ್ವೇಷವನ್ನು ಬಡಿದೆಬ್ಬಿಸುವ ಯೋಜಿತ ಸಂಚಿನ‌ ಭಾಗವಾಗಿರುವ ಸಾಧ್ಯತೆ ಇದೆ.‌ ಈ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣದ ಕೂಲಂಕುಷ ತನಿಖೆ ನಡೆಸಬೇಕು ಎಂದು ಹೇಳಿದ್ದಾರೆ.

ಚುನಾವಣಾ ಪ್ರಕ್ರಿಯೆ ಚಾಲನೆಯಲ್ಲಿರುವಾಗಲೇ ನಗರದಲ್ಲಿ ನಿತ್ಯ ಅತ್ಯಾಚಾರ, ಕೊಲೆಗಳು ನಿರ್ಭೀತಿಯಿಂದ ನಡೆಯುತ್ತಿರುವುದು ಕಳವಳಕಾರಿ ಸಂಗತಿ.
ಈ ಸರ್ಕಾರ ಅಸ್ತಿತ್ವದಲ್ಲಿರುವಾಗ ಚುನಾವಣೆ ನ್ಯಾಯಯುತವಾಗಿ ನಡೆಯುವುದು ಅನುಮಾನ.
ಚುನಾವಣಾ ಆಯೋಗ ಈ ಬೆಳವಣಿಗೆಗಳನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ತಿಳಿಸಿದ್ದಾರೆ.

Join Whatsapp
Exit mobile version