ಪಡಿತರ ಚೀಟಿ ಇ-ಕೆವೈಸಿ ಮಾಡಿಸಲು ಆ.31 ಕೊನೆ ದಿನ

Prasthutha|

ಮಂಗಳೂರು: ಸರಕಾರವು ಪಡಿತರ ಚೀಟಿಯಲ್ಲಿರುವ ಎಲ್ಲಾ ಸದಸ್ಯರ ಇ-ಕೆವೈಸಿ ಮಾಡಿಸುವಂತೆ ನಿರ್ದೇಶನ ನೀಡಿದ್ದರೂ ಪಡಿತರ ಚೀಟಿಯಲ್ಲಿ ಹೆಸರಿರುವ ಕೆಲವರು ಇನ್ನೂ ಇ-ಕೆವೈಸಿ ಮಾಡದಿರುವುದು ಕಂಡುಬರುತ್ತಿದೆ. ಹಾಗಾಗಿ ಜಿಲ್ಲೆಯ ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ತಕ್ಷಣ ಇ-ಕೆವೈಸಿ ಮಾಡಬೇಕು ಎಂದು ದ.ಕ.ಜಿಲ್ಲಾಧಿಕಾರಿ ಕಚೇರಿ ಪ್ರಕಟನೆ ತಿಳಿಸಿದೆ.

- Advertisement -


ಪಡಿತರ ಚೀಟಿದಾರರು ಪ್ರತೀ ತಿಂಗಳು ಪಡಿತರ ಪಡೆಯುವುದಲ್ಲದೆ ಅನ್ನಭಾಗ್ಯ ನೇರ ನಗದು ವರ್ಗಾವಣೆಯ ಪ್ರಯೋಜನವನ್ನು ಕೂಡ ಪಡೆಯುತ್ತಿದ್ದಾರೆ. ಹಾಗಾಗಿ ಇ-ಕೆವೈಸಿ ಮಾಡಿಸದ ಪಡಿತರ ಚೀಟಿದಾರರು ಬಯೋಮೆಟ್ರಿಕ್ ನೀಡಿ ಆಗಸ್ಟ್ 31 ರೊಳಗೆ ಇ-ಕೆವೈಸಿ ಮಾಡಿಸಬೇಕು.


ವಲಸೆ ಹೋದ ಅಥವಾ ಬೇರೆ ಜಿಲ್ಲೆಗಳಿಗೆ ಕೆಲಸ ನಿಮಿತ್ತ ತೆರಳಿರುವ ವ್ಯಕ್ತಿಗಳು ಅಲ್ಲಿನ ಯಾವುದೇ ನ್ಯಾಯಬೆಲೆ ಅಂಗಡಿಗಳಲ್ಲಿ ಬಯೋಮೆಟ್ರಿಕ್ ಮಾಡಿಸಬಹುದಾಗಿದೆ.



Join Whatsapp