ಮುಂಬೈ: ಬಾಲಿವುಡ್ ನಟ ಶಾರುಖ್ ಖಾನ್ಗೆ ಕೊಲೆ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಛತ್ತೀಸ್ಗಢದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ನಟನಿಗೆ ಕರೆ ಮಾಡಿ 50 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದಕ್ಕಾಗಿ ಮೊಹಮ್ಮದ್ ಫೈಜಾನ್ ಖಾನ್ ಎಂಬ ವಕೀಲನನ್ನು ಛತ್ತೀಸ್ಗಢದ ರಾಯ್ಪುರದ ಅವರ ನಿವಾಸದಲ್ಲಿ ಬಂಧಿಸಲಾಗಿದೆ.
ಮುಂಬೈ ಪೊಲೀಸರ ಮುಂದೆ ಹಾಜರಾಗಲು ವಿಫಲವಾದ ನಂತರ ಅವರನ್ನು ಬಂಧಿಸಲಾಯಿತು. ಕಳೆದ ವಾರ ಬೆದರಿಕೆ ಕರೆ ಮಾಡಲು ಬಳಸಲಾದ ತನ್ನ ಮೊಬೈಲ್ ಫೋನ್ನ್ನು ಯಾರೋ ಕದ್ದಿದ್ದಾರೆ ಎಂದು ಅವರು ಹೇಳಿದ್ದರು. ನವೆಂಬರ್ 2 ರಂದು ಪೊಲೀಸ್ ಕೇಸ್ ದಾಖಲಿಸಿದ್ದೇನೆ ಎಂದಿದ್ದರು.
ಪೊಲೀಸರು ಭಾರತೀಯ ನ್ಯಾಯ ಸಂಹಿತೆಯ (ಬಿಎನ್ಎಸ್) ಸೆಕ್ಷನ್ 308(4) (ಸಾವಿನ ಬೆದರಿಕೆ ಅಥವಾ ಗಂಭೀರ ಗಾಯದ ಬೆದರಿಕೆಗಳನ್ನು ಒಳಗೊಂಡ ಸುಲಿಗೆ) ಮತ್ತು 351(3)(4) (ಅಪರಾಧ ಬೆದರಿಕೆ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.