ಜೂ.1ರಂದು ಸಭೆ ನಡೆಸಲಿರುವ ‘ಇಂಡಿಯಾ’ ನಾಯಕರು

Prasthutha|

ನವದೆಹಲಿ: ಲೋಕಸಭೆ ಚುನಾವಣೆಗೆ ಏಳನೇ ಮತ್ತು ಅಂತಿಮ ಹಂತದ ಮತದಾನ ಜೂನ್ 1ರಂದು ನಡೆಯಲಿದೆ. ಆದೇ ದಿನ ಮಧ್ನಾಹ್ನ ‘ಇಂಡಿಯಾ’ ಮೈತ್ರಿಕೂಟದ ನಾಯಕರು ದೆಹಲಿಯಲ್ಲಿ ಸಭೆ ನಡೆಸುವ ಸಾಧ್ಯತೆ ಇದೆ ಮಾಧ್ಯಮಗಳು ವರದಿ ಮಾಡಿವೆ.

- Advertisement -

ಜೂನ್ 4ರಂದು ಚುನಾವಣಾ ಫಲಿತಾಂಶ ಹೊರಬೀಳಲಿದೆ. ಇದರ ಬೆನ್ನಲ್ಲೇ 7 ಹಂತಗಳಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ತಾವು ಅನುಸರಿಸಿದ ಕಾರ್ಯತಂತ್ರ ಹಾಗೂ ಕಾರ್ಯಕ್ಷಮತೆ ಬಗ್ಗೆ ನಾಯಕರು ಚರ್ಚೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.


ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಇತರೆ ಪಕ್ಷಗಳ ನಾಯಕರು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎನ್ನಲಾಗಿದೆ.

Join Whatsapp