ಮಳಲಿ ಮಸೀದಿ ವಿಚಾರ | ಕಾನೂನು ಸುವ್ಯವಸ್ಥೆಗೆ ಧಕ್ಕೆ ತರಲು ಆಸ್ಪದ ನೀಡುವುದಿಲ್ಲ: ಎಡಿಜಿಪಿ

Prasthutha|

ಮಂಗಳೂರು: ಮಳಲಿಯಲ್ಲಿ ಹುಟ್ಟಿಕೊಂಡಿರುವ ವಿವಾದಕ್ಕೆ ಸಂಬಂಧಿಸಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರಲು ಆಸ್ಪದ ನೀಡುವುದಿಲ್ಲ ಎಂದು ಎಡಿಜಿಪಿ ( ಕಾನೂನು ಮತ್ತು ಸುವ್ಯವಸ್ಥೆ) ಅಲೋಕ್ ಕುಮಾರ್ ಹೇಳಿದ್ದಾರೆ.

- Advertisement -

ಎಡಿಜಿಪಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಪ್ರಥಮ ಬಾರಿಗೆ ಮಂಗಳೂರು ಆಗಮಿಸಿರುವ ಅವರು ಇಂದು ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಅಧಿಕಾರಿಗಳ ಜತೆ ಸಭೆಗೆ ಮುನ್ನ ಸುದ್ದಿಗಾರರ ಜತೆ ಮಾತನಾಡಿದರು.
ಮಳಲಿ ವಿಚಾರ ಸದ್ಯ ನ್ಯಾಯಾಲಯದಲ್ಲಿದೆ. ಜೂನ್ 3ರವರೆಗೆ ಯಥಾಸ್ಥಿತಿ ಕಾಯ್ದುಕೊಳ್ಳಲು ನ್ಯಾಯಾಲಯ ಆದೇಶಿಸಿದೆ . ಆ ನಿಟ್ಟಿನಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಕ್ರಮ ವಹಿಸಲಾಗಿದೆ ಎಂದು ಹೇಳಿದರು.
ಮಂಗಳೂರು ಸೂಕ್ಷ್ಮ ಪ್ರದೇಶ. ಒಂದು ವರ್ಷದಲ್ಲಿ ಚುನಾವಣೆಯೂ ಇದೆ. ಈ ಬಗ್ಗೆ ಅಧಿಕಾರಿಗಳ ಜತೆ ಮಾತನಾಡಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

ಸಾಮಾಜಿಕ ಜಾಲತಾಣಗಳ ಮೇಲೆ ಅತೀ ಮುಖ್ಯವಾಗಿದೆ. ಸೈಬರ್ ಅಪರಾಧಗಳು ಹೆಚ್ಚುತ್ತಿದ್ದು ಮಂಗಳೂರು ಪೋಲಿಸರು ಅಗತ್ಯ ಕ್ರಮ ವಹಿಸಿದ್ದಾರೆ. ಆ ಬಗ್ಗೆ ಪರಿಶೀಲನೆ ನಡೆಸಲಾಗುವುದು. ಜತೆಗೆ ಕರಾವಳಿಯಲ್ಲಿ ಕೈಗೊಳ್ಳಬೇಕಾದ ಅಗತ್ಯ ಕ್ರಮಗಳ ಬಗ್ಗೆ ಅಧಿಕಾರಿಗಳ ಜತೆ ಚರ್ಚಿಸಲಾಗುವುದು ಎಂದು ಅವರು ಹೇಳಿದರು.
ಈ ಸಂದರ್ಭ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್, ಡಿಸಿಪಿಗಳಾದ ಹರಿರಾಂ ಶಂಕರ್, ದಿನೇಶ್ ಕುಮಾರ್ ಉಪಸ್ಥಿತರಿದ್ದರು.

Join Whatsapp